ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಮಂಡಿಸುತ್ತಿದ್ದು, ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕುಗಳಲ್ಲಿ ಬಡ್ಡಿರಹಿತವಾಗಿ ನೀಡುವ ಸಾಲದ ಮಿತಿಯನ್ನು 50,000 ರೂ.ಗಳಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಒಂದೂವರೆ ಲಕ್ಷ ಕಿಲೋ ಲೀಟರ್‌ನಿಂದ ಎರಡು ಲಕ್ಷ ಕಿಲೋ ಲೀಟರ್‌ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ಸರ್ಕಾರದಿಂದ 250 ಕೋಟಿ ರೂ.ಗಳಷ್ಟು ನೆರವಾಗಲಿದೆ ಎಂದರು.
ಮೀನುಗಾರಿಕಾ ದೋಣಿಗಳಲ್ಲಿನ ಸೀಮೆ ಎಣ್ಣೆ ಇಂಜಿನ್‌ಗಳನ್ನು ಪೆಟ್ರೋಲ್/ಡೀಸೆಲ್ ಇಂಜಿನ್‌ಗಳಾಗಿ ಬದಲಾಯಿಸಲು ತಲಾ 50,000 ರೂ. ಸಹಾಯಧನ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 4,000 ಸೀಮೆ ಎಣ್ಣೆ ಇಂಜಿನ್‌ಗಳ ಬದಲಾವಣೆಗೆ 20 ಕೋಟಿ ರೂ. ಸಹಾಯಧನ ಒದಗಿಸಲಾಗುವುದು ಎಂದು ಅವರು ಹೇಳಿದರು.
ರಾಜ್ಯದ ಜಲಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಹೆಚ್ಚಿನ ಮೀನು ಮರಿಗಳನ್ನು ಉತ್ಪಾದಿಸುವ ಮೂಲಕ ಒಳನಾಡು ಮೀನುಗಾರಿಕೆಗೆ ಇರುವ ಅವಕಾಶಗಳನ್ನು ಬಳಸಿಕೊಳ್ಳಲಾಗುವುದು. ಜೊತೆಗೆ, ಹೆಚ್ಚಿನ ಬೇಡಿಕೆಯಿರುವ ಕಾಟ್ಲಾ ಮತ್ತು ರೋಹು ಮೀನು ಮರಿಗಳನ್ನು ಅಧಿಕ ಪ್ರಮಾಣದಲ್ಲಿ ಉತ್ಪಾದಿಸಿ ಒಳನಾಡು ಮೀನುಗಾರಿಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಸೀಗಡಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಉತ್ತಮ ಮಾರುಕಟ್ಟೆಯನ್ನು ಕಲ್ಪಿಸಲು ಕ್ರಮವಹಿಸಲಾಗುವುದು. ಅಲ್ಲದೆ, ಮೀನುಗಾರಿಕೆಗೆ ಈಗ ಲಭ್ಯವಿರುವ ಶೈತ್ಯಾಗಾರಗಳನ್ನು ದುಪ್ಪಟ್ಟುಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…
ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…
ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…