ನೇಣು ಬಿಗಿದ ಸ್ಥಿತಿಯಲ್ಲಿ ಪ್ರಿಯತಮೆಯ ಮನೆಯಲ್ಲಿ ವ್ಯಕ್ತಿ ಶವ ಪತ್ತೆ!

ಮಂಡ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಪ್ರಿಯತಮೆಯ ಮನೆಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವ ಘಟನೆ ಮಂಡ್ಯದ ಚೆನ್ನಪ್ಪನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ತಳಗವಾದಿ ಗ್ರಾಮದ ಸುಮಾರು ೪೦ ವರ್ಷದ ಸಿದ್ದರಾಜು ಮೃತ ವ್ಯಕ್ತಿ.

ಈತ ಚೆನ್ನಪ್ಪನದೊಡ್ಡಿ ಗ್ರಾಮದಲ್ಲಿರುವ ಪ್ರಿಯತಮೆಯ ಮನೆಗೆ ಹೋಗಿದ್ದು, ಅಲ್ಲಿ ಇಬ್ಬರ ನಡುವೆ ಕಲಹ ಉಂಟಾಗಿ ಖಿನ್ನತೆಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸಿದ್ದರಾಜು ಕುಟುಂಬಸ್ಥರು ಇದೊಂದು ಕೊಲೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

× Chat with us