ಮಂಡ್ಯ: ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಸಂದರ್ಭದಲ್ಲಿ ಕಲಾವಿದರತ್ತ ₹ 500 ನೋಟು ಎಸೆದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ನಗರದ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಾರ್ಚ್ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆಯೋಜನೆಗೊಂಡಿತ್ತು. ತಾಲ್ಲೂಕಿನ ಕ್ಯಾತುಂಗೆರೆಯಿಂದ ಅವರು ರೋಡ್ ಶೋ ಆರಂಭಿಸಿದ್ದರು. ಈ ವೇಳೆ ಜಾನಪದ ಕಲಾ ತಂಡಗಳ ಕಲಾವಿದರು ಡಿಕೆಶಿ ಅವರನ್ನು ಹಣ ಕೊಡುವಂತೆ ಕೋರಿದ್ದರು. ಈ ಸಂದರ್ಭದಲ್ಲಿ ಅವರು ಕಲಾವಿದರತ್ತ ಹಣದ ಕಟ್ಟು ಎಸೆದಿದ್ದರು.
ನಂತರ ಹಣ ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದರ ವಿರುದ್ಧ ಚುನಾವಣೆ ಸೆಕ್ಟರ್ ಅಧಿಕಾರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ತನಿಖೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಏ.2ರಂದು ಗ್ರಾಮಾಂತರ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…