BREAKING NEWS

ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್

ಲಕ್ನೋ : ಸನಾತನ ಧರ್ಮವನ್ನು ಟೀಕೆ ಮಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರಪ್ರದೇಶದಲ್ಲಿ ಎಫ್‍ಐಆರ್ ದಾಖಲಾಗಿದೆ.

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಕರೆ ನೀಡಿದ್ದರು. ಇವರ ಹೇಳಿಕೆಯನ್ನು ಖರ್ಗೆ ಬೆಂಬಲಿಸಿದ್ದರು. ಹೀಗಾಗಿ ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗೆ ಧಕ್ಕೆ) ಹಾಗೂ 153 ಎ (ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಿಯಾಂಕ್‌ ಖರ್ಗೆ ಜೊತೆ ಉದಯನಿಧಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ನಡೆದ ಟೆಕ್ ಸಮ್ಮಿಟ್ 2023 ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ, ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದಿದ್ದರು.

ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ. ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ. ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವುದಾದರೆ ಸಂವಿಧಾನವೇ ನಮ್ಮ ಧರ್ಮ ಆಗಬೇಕು ಎಂದು ಹೇಳಿದ್ದರು.

lokesh

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

3 hours ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

3 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

3 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

4 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

4 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

4 hours ago