ಬೆಂಗಳೂರು : ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನದ ಮಾಜಿ ಶಾಸಕ ಪ್ರೀತಂಗೌಡಗೆ ಸಂಕಷ್ಟ ಎದುರಾಗಿದೆ.
ಪ್ರಜ್ವಲ್ ರೇವಣ್ಣ ಸಂಬಂಧಿಸಿ ೩ನೇ ಕೇಸ್‌ನಲ್ಲಿ ಪ್ರೀತಂಗೌಡ ಹೆಸರು ತಳಕು ಹಾಕಿಕೊಂಡಿದೆ. ಅಶ್ಲೀಲ ವೀಡಿಯೋ ಹಂಚಿಕೆ ಆರೋಪ ಕೇಳಿ ಬಂದಿದ್ದು, ಇದೀಗ ಪ್ರೀತಂಗೌಡ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.





