BREAKING NEWS

ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ : 32 ಮಂದಿ ಸಜೀವ ದಹನ

ಕಜಕಿಸ್ತಾನ್ : ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದು, 14 ಮಂದಿ ನಾಪತ್ತೆಯಾದ ಘಟನೆ ಕಜಕಿಸ್ತಾನದಲ್ಲಿ ನಡೆದಿದೆ.

ಲಕ್ಸೆಂಬರ್ಗ್ ಮೂಲದ ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಕಂಪನಿಯ ಕಲ್ಲಿದ್ದಲು ಘಟಕದಲ್ಲಿ ಈ ಅವಘಡ ಸಂಭವಿಸಿದೆ. ಗಣಿಯಲ್ಲಿ 252 ಜನ ಕೆಲಸ ಮಾಡುತ್ತಿದ್ದರು. ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ 206 ಜನರನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮೀಥೇನ್ ಅನಿಲ ಸೋರಿಕೆಯಿಂದ ಈ ಅವಘಡ ಸಂಭವಿಸಿದೆ. ಈ ದುರಂತ ಬಹಳ ದುರಾದೃಷ್ಟಕರವಾದದ್ದು ಎಂದು ಕಜಕಿಸ್ತಾನದ ಅಧ್ಯಕ್ಷ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಹೇಳಿದ್ದಾರೆ.

ದುರಂತದ ಬಳಿಕ, ಮಿತ್ತಲ್ ಸಂಸ್ಥೆಯೊಂದಿಗಿನ ಸರ್ಕಾರದ ಹೂಡಿಕೆಯನ್ನು ವಾಪಸ್ ಪಡೆಯಲು ಆದೇಶಿಸಲಾಗಿದೆ. ಅಲ್ಲದೇ ಕಂಪನಿಯ ಘಟಕಗಳನ್ನು ಸರ್ಕಾರ ವಶಪಡಿಸಿಕೊಳ್ಳಲಿದೆ. ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲೂ ಅಗ್ನಿ ಅವಘಡ ಸಂಭವಿಸಿ 9 ಜನ ಸಾವನ್ನಪ್ಪಿದ್ದರು. ಈ ವೇಳೆ ಪರಿಸರ ನಿಯಮಗಳ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಆರ್ಸೆಲರ್ ಮಿತ್ತಲ್ ಟೆಮಿರ್ಟೌ ಲಕ್ಸೆಂಬರ್ಗ್ ಮೂಲದ ಬಹುರಾಷ್ಟ್ರೀಯ ಕಂಪನಿಯಾಗಿದ್ದು, ಇದು ವಿಶ್ವದ ಎರಡನೇ ಅತಿ ದೊಡ್ಡ ಉಕ್ಕನ್ನು ಉತ್ಪಾದಿಸುತ್ತದೆ.

lokesh

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

3 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

4 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

6 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

9 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

10 hours ago