ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧಿ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 8 ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.
ರಾಯಗಢ ಜಿಲ್ಲೆಯ ಎಂಐಡಿಸಿ ಮಹಾಡ್‌ನಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ತಿಳಿಸಿದ್ದಾರೆ.
ಬೆಳಗ್ಗೆ 7 ಗಂಟೆ ವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದವು. ಸಂಜೆ 5 ಗಂಟೆ ವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿವೆ. ಉಳಿದು ಮೂವರು ನಾಪತ್ತೆಯಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ. ಇದು ಸೈಟ್‌ನಲ್ಲಿ ರಾಸಾಯನಿಕಗಳಿಂದ ತುಂಬಿದ ಬ್ಯಾರೆಲ್‌ಗಳು ಸ್ಫೋಟಗೊಳ್ಳಲು ಕಾರಣವಾಗಬಹುದು. ಇದು ಬೆಂಕಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.





