BREAKING NEWS

ಔಷಧಿ ಕಂಪನಿಯಲ್ಲಿ ಬೆಂಕಿ ಅಗ್ನಿ ಅವಘಡ : 8 ಮಂದಿ ಸಾವು

ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧಿ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 8 ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.

ರಾಯಗಢ ಜಿಲ್ಲೆಯ ಎಂಐಡಿಸಿ ಮಹಾಡ್‌ನಲ್ಲಿರುವ ಬ್ಲೂ ಜೆಟ್ ಹೆಲ್ತ್‌ಕೇರ್‌ನಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ತಿಳಿಸಿದ್ದಾರೆ.

ಬೆಳಗ್ಗೆ 7 ಗಂಟೆ ವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದವು. ಸಂಜೆ 5 ಗಂಟೆ ವರೆಗೆ ನಾಲ್ಕು ಮೃತದೇಹಗಳು ಪತ್ತೆಯಾಗಿವೆ. ಉಳಿದು ಮೂವರು ನಾಪತ್ತೆಯಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪ್ರಾಥಮಿಕ ತನಿಖಾ ವರದಿಯಿಂದ ತಿಳಿದುಬಂದಿದೆ. ಇದು ಸೈಟ್‌ನಲ್ಲಿ ರಾಸಾಯನಿಕಗಳಿಂದ ತುಂಬಿದ ಬ್ಯಾರೆಲ್‌ಗಳು ಸ್ಫೋಟಗೊಳ್ಳಲು ಕಾರಣವಾಗಬಹುದು. ಇದು ಬೆಂಕಿಯನ್ನು ಮತ್ತಷ್ಟು ತೀವ್ರಗೊಳಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

lokesh

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

7 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

7 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

7 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

10 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

10 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago