ಬೆಂಗಳೂರು : ಮುಂಬೈನಿಂದ ಇಂದು ಬೆಂಗಳೂರಿಗೆ ಆಗಮಿಸಿದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ (ರೈಲಿನ ಸಂಖ್ಯೆ: 11301 ) ಬೆಂಕಿ ಕಾಣಿಸಿಕೊಂಡು ಕೆಲ ಕಾಲ ಎಲ್ಲರನ್ನೂ ಆತಂಕಗೊಳಿಸಿದ ಘಟನೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ.
ನಿಲ್ದಾಣಕ್ಕೆ ಬೆಳಗಿನ ಜಾವ 5.45ರ ಸುಮಾರಿಗೆ ರೈಲು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ಆಗಮಿಸಿತು. ರೈಲು ಆಗಮಿಸಿದ ಎರಡು ಗಂಟೆಗಳ ನಂತರ ಅಂದರೆ ಸುಮಾರು 7.30 ಸುಮಾರಿಗೆ ರೈಲಿನ ಬಿ 1 ಹಾಗೂ ಬಿ2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು.
ಕೂಡಲೇ ರೈಲ್ವೆ ನಿಲ್ದಾಣದ ಸಿಬ್ಬಂದಿಯು ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಯು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಬೋಗಿಗಳಲ್ಲಿ ಬೆಂಕಿ ಹೇಗೆ ಬಂತು ಎಂಬುದನ್ನು ತಿಳಿಯಲು ರೈಲ್ವೆ ಇಲಾಖೆಯು ತನಿಖೆಗೆ ಆದೇಶ ನೀಡಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ನೈರುತ್ಯ ರೈಲ್ವೆ ವಿಭಾಗ, ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಲೇ ನಾವು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದೆವು. ಕೂಡಲೇ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿವೆ. ರೈಲು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಆಗಮಿಸಿ ಸುಮಾರು 2 ಗಂಟೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಅಷ್ಟರಲ್ಲಿ ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಕೆಳಗಿಳಿದಿದ್ದರು. ಹಾಗಾಗಿ, ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದೆ.
ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…
ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…
ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್ ರಿಲೀಫ್…
ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…
ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…
ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…