ಢಾಕಾ : ಬಾಂಗ್ಲಾದೇಶದ ಅತಿದೊಡ್ಡ ಬಟ್ಟೆ ಮಾರುಕಟ್ಟೆಗಳಲ್ಲಿ ಒಂದಾದ ‘ಬಂಗಾಬಜಾರ್’ನಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಢಾಕಾದಲ್ಲಿರುವ ಈ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6.10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿರುವುದಾಗಿ ಅಲ್ಲಿನ ಪತ್ರಿಕೆಯೊಂದರಲ್ಲಿ ವರದಿಯಾಗಿದೆ.
ದುರಂತಕ್ಕೆ ಕಾರಣವೇನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿ ನಂದಿಸಲು 47 ಅಗ್ನಿಶಾಮಕ ಘಟಕಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ನಿಯಂತ್ರಣ ಕೊಠಡಿಯ ಅಧಿಕಾರಿ ರಫಿ ಅಲ್ ಫಾರುಕ್ ಹೇಳಿಕೆ ನೀಡಿದ್ದಾರೆ.
ಮಾರುಕಟ್ಟೆಯಲ್ಲಿನ ಮಳಿಗೆಗಳ ಮಾಲೀಕರು ಮತ್ತು ಸಿಬ್ಬಂದಿ, ಬೆಂಕಿ ಬಿದ್ದಿರುವ ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ತಮ್ಮ ಮಳಿಗೆಗಳಿಂದ ಬಟ್ಟೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…