ಭೋಪಾಲ್ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮುಂಜಾನೆ ಮಧ್ಯಪ್ರದೇಶದ ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ರೈಲು ಭೋಪಾಲ್‍ನಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ರೈಲಿನ ಕೋಚ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವು ಪ್ರಯಾಣಿಕರು ಸಹ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ರೈಲ್ವೇ ಅಧಿಕಾರಿಗಳು ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಅಲ್ಲದೇ ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…