BREAKING NEWS

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ : ಪ್ರಯಾಣಿಕರು ಸುರಕ್ಷಿತ

ಭೋಪಾಲ್ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ‌ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮುಂಜಾನೆ ಮಧ್ಯಪ್ರದೇಶದ ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ರೈಲು ಭೋಪಾಲ್‍ನಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ರೈಲಿನ ಕೋಚ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದೆ. ಬಳಿಕ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ ಎನ್ನಲಾಗಿದೆ. ಘಟನೆಯ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕೆಲವು ಪ್ರಯಾಣಿಕರು ಸಹ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ರೈಲ್ವೇ ಅಧಿಕಾರಿಗಳು ಬ್ಯಾಟರಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಅಲ್ಲದೇ ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago