Mysore
29
scattered clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಜಿಂಕೆ ಬೇಟೆಯಾಡುವ ವೇಳೆ ಅರಣ್ಯಾಧಿಕಾರಿಗಳಿಂದ ಫೈರಿಂಗ್ : ಬೇಟೆಗಾರ ಸಾವು

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ ತಂಡ ತಡರಾತ್ರಿ ಜಿಂಕೆ ಬೇಟೆಯಾಡಲು ಬಂದಿದ್ದರು. ಬೇಟೆಗಾರರು ನಾಲ್ಕಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದರು.

ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದು ಗುಂಡೇಟಿಗೆ ಬಲಿಯಾದ ಮನೋಜ್ ಶವವನ್ನ ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಪರೀಕ್ಷೆಗೆ ಸಾಗಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಬಂಡೀಪುರ ಹುಲಿಯೋಜನೆ ನಿರ್ದೇಶಕ ಡಾ.ಪಿ.ರಮೇಶ್‌ ಕುಮಾರ್‌, ಎಸಿಎಫ್‌ ರವೀಂದ್ರ, ಚಾಮರಾಜನಗರ ಎಸ್ಪಿ ಪದ್ಮಿನಿಸಾಹು, ಗುಂಡ್ಲುಪೇಟೆ ಇನ್ಸ್‌ಪೆಕ್ಟರ್‌ ಪರಶಿವಮೂರ್ತಿ, ಎಸ್‌ಐ ಸಾಹೇಬಗೌಡ ಮತ್ತಿತರರು ಭೇಟಿ ನೀಡಿದ್ದರು . ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ