ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದ ಬೇಟೆಗಾರ.10 ಬೇಟೆಗಾರರ ತಂಡ ತಡರಾತ್ರಿ ಜಿಂಕೆ ಬೇಟೆಯಾಡಲು ಬಂದಿದ್ದರು. ಬೇಟೆಗಾರರು ನಾಲ್ಕಕ್ಕೂ ಹೆಚ್ಚು ಕಡವೆ ಬೇಟೆಯಾಡಿ ಕೊಂಡೊಯ್ಯುತ್ತಿದ್ದರು.
ಈ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಬೇಟೆಗಾರರನ್ನು ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯಾಧಿಕಾರಿಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಅರಣ್ಯಾಧಿಕಾರಿ ಆತ್ಮರಕ್ಷಣೆಗಾಗಿ ಬೇಟೆಗಾರರ ಮೇಲೆ ಫೈರಿಂಗ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದವರು ಪರಾರಿಯಾಗಿದ್ದು ಗುಂಡೇಟಿಗೆ ಬಲಿಯಾದ ಮನೋಜ್ ಶವವನ್ನ ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಪರೀಕ್ಷೆಗೆ ಸಾಗಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಬಂಡೀಪುರ ಹುಲಿಯೋಜನೆ ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್, ಎಸಿಎಫ್ ರವೀಂದ್ರ, ಚಾಮರಾಜನಗರ ಎಸ್ಪಿ ಪದ್ಮಿನಿಸಾಹು, ಗುಂಡ್ಲುಪೇಟೆ ಇನ್ಸ್‌ಪೆಕ್ಟರ್ ಪರಶಿವಮೂರ್ತಿ, ಎಸ್‌ಐ ಸಾಹೇಬಗೌಡ ಮತ್ತಿತರರು ಭೇಟಿ ನೀಡಿದ್ದರು . ಈ ಕುರಿತು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…