“ಭಾರತದ ಹೊರಗೆ ಸ್ಥಾಪಿಸಲಾದ ಮೊದಲ ಐಐಟಿ ಕ್ಯಾಂಪಸ್ ಜಾಂಜಿಬಾರ್‌ನಲ್ಲಿರಲಿದೆ” ಎಂದು ಸಚಿವಾಲಯ ಹೇಳಿದೆ.
ಭಾರತದ ಶಿಕ್ಷಣ ಸಚಿವಾಲಯ, ಐಐಟಿ ಮದ್ರಾಸ್ ಮತ್ತು ಜಾಂಜಿಬಾರ್‌ನ ಶಿಕ್ಷಣ ಮತ್ತು ವೃತ್ತಿಪರ ತರಬೇತಿ ಸಚಿವಾಲಯದ ನಡುವೆ ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಅದು ಹೇಳಿದೆ.
ರಾಷ್ಟ್ರೀಯ ಶಿಕ್ಷಣ ನೀತಿ 2020 (NEP) ಉನ್ನತ ಕಾರ್ಯಕ್ಷಮತೆ ಹೊಂದಿರುವ ಭಾರತೀಯ ವಿಶ್ವವಿದ್ಯಾಲಯಗಳ ಕ್ಯಾಂಪಸ್‌ಗಳನ್ನು ಇತರ ದೇಶಗಳಲ್ಲಿ ಸ್ಥಾಪಿಸಲು ಪ್ರೋತ್ಸಾಹಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.
“ಈ ಕ್ಯಾಂಪಸ್ ಭಾರತ ಮತ್ತು ತಾಂಜಾನಿಯಾ ನಡುವಿನ ದೀರ್ಘಕಾಲದ ಸ್ನೇಹವನ್ನು ಪ್ರತಿಬಿಂಬಿಸುತ್ತದೆ. ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಶೈಕ್ಷಣಿಕ ಪಾಲುದಾರಿಕೆಯ ಸಂಬಂಧವನ್ನು ಔಪಚಾರಿಕಗೊಳಿಸಲಾಗಿದೆ. ಐಐಟಿ 2023ರ ಅಕ್ಟೋಬರ್ ತಿಂಗಳಿನಲ್ಲಿ ಆರಂಭಗೊಳ್ಳಲಿದೆ ಎಂದು ಹೇಳಿದೆ.