ಬೆಂಗಳೂರು : ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಟಿಕೆಟ್ ಘೋಷಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 189 ಅಭ್ಯರ್ಥಿಗಳಲ್ಲಿ ಹೊಸ ಮುಖ ತರುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೊದಲ ಪಟ್ಟಿ ನೋಡಿದರೆ ಈ ಬಾರಿ ಬಿಜೆಪಿ ಮತ್ತೊಮ್ಮೆ ಗೆಲುವು ಸಾಧಿಸುವ ದಿಕ್ಸೂಚಿ ಆಗಿದೆ ಎಂದರು.
ಟಿಕೆಟ್ ಕೈ ತಪ್ಪಿದವರು ಬಂಡಾಯ ಏಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರಿಗೆ ಟಿಕೆಟ್ ಕೈ ತಪ್ಪುವ ಬಗ್ಗೆ ಆಗಾಗ್ಲೇ ಹೇಳಿದ್ದೇವೆ. ಒಟ್ಟು 3 ದಿನ ಚರ್ಚೆ ಮಾಡಿ ಈ ನಿರ್ಧಾರ ಮಾಡಿದ್ದೇವೆ ಎಂದರು.
ಇನ್ನೂ 34 ಕ್ಷೇತ್ರಗಳ ಪಟ್ಟಿ ಎರಡು ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ನಾವು ಮಾಡಿರುವ ಕೆಲಸಗಳನ್ನ ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ. ಬೂತ್ ಮಟ್ಟದಲ್ಲಿ ತೆರಳಿ, ಹಳ್ಳಿ ಹಳ್ಳಿಗೂ ಹೋಗಿ ಪ್ರಚಾರ ಮಾಡುತ್ತೇವೆ. ರಾಜ್ಯದ ಸಮರ್ಥ ಅಭಿವೃದ್ಧಿ, ಕೋವಿಡ್ ವೇಳೆ ಎದುರಿಸಿದ ಸವಾಲುಗಳು, ಹಲವಾರು ಯುವಕರಿಗೆ ಕೊಟ್ಟ ಕೆಲಸ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು.
ಹಿರಿಯ ನಾಯಕರಿಗೆ ಟಿಕೆಟ್ ಕೈ ತಪ್ಪಿರುವ ವಿಚಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯರು ಪಕ್ಷವನ್ನ ಕಟ್ಟಿದ್ದಾರೆ. ಪಕ್ಷ ಹಿರಿಯರನ್ನು ಬೆಳೆಸಿದೆ. ಅವರಿಗೆ ಪಕ್ಷದೊಂದಿಗೆ ಅನ್ಯೋನ್ಯ ಸಂಬಂಧ ಇರುವ ಕಾರಣ ಯಾವುದು ತೊಂದರೆ ಆಗುವುದಿಲ್ಲ. ಟಿಕೆಟ್ ತಪ್ಪುವವರಿಗೆ
ಯಾಕೆ? ಏನು ಕಾರಣ? ಮುಂದೆ ಯಾವ ರೀತಿಯ ಅವಕಾಶ ಇದೆ ಎಂಬುದನ್ನ ಹೇಳಿದ್ದೀವಿ. ನಮ್ಮದು ರಾಷ್ಟ್ರೀಯ ಪಕ್ಷ, ಶಿಸ್ತಿನ ಪಕ್ಷ ಬಿಜೆಪಿ. ಎಲ್ಲ ನಿಭಾಯಿಸುವ ಶಕ್ತಿ ಬಿಜೆಪಿಗೆ ಇದೆ ಎಂದರು.
ಇನ್ನು ಪಟ್ಟಿ ತಯಾರಿಸುವ ವೇಳೆ ಯಡಿಯೂರಪ್ಪ ಅಸಮಾಧಾನಗೊಂಡಿದ್ದಾರೆ ಎನ್ನುವುದು ಊಹಾಪೋಹ. ಎರಡು ದಿನ ಪೂರ್ಣ ಪ್ರಮಾಣದಲ್ಲಿ ಕೂತು ನಿರ್ಧಾರ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿ ಮಾಡಿ ಕೆಲವು ಸಲಹೆ ಪಡೆಯಲಾಗಿದೆ. ಸಂಪೂರ್ಣವಾಗಿ ಯಡಿಯೂರಪ್ಪ ಅವರು ಈ ಪಟ್ಟಿ ತಯಾರಿಸುವಲ್ಲಿ ಭಾಗಿಯಾಗಿದ್ದಾರೆ ಎಂದರು.
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…
ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…
ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…