BREAKING NEWS

ರತನ್ ಟಾಟಾಗೆ ಮಹಾರಾಷ್ಟ್ರ ಸರ್ಕಾರದ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿ

ಮುಂಬೈ:  ಹಿರಿಯ ಕೈಗಾರಿಕೋದ್ಯಮಿ ಮತ್ತು ಟಾಟಾ ಸನ್ಸ್‌ನ  ಅಧ್ಯಕ್ಷ ರತನ್ ಟಾಟಾ ಅವರಿಗೆ ಮೊದಲ ‘ಉದ್ಯೋಗ ರತ್ನ’ ಪ್ರಶಸ್ತಿಯನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.

ಯುವ ಉದ್ಯಮಿ, ಮಹಿಳಾ ಉದ್ಯಮಿ ಮತ್ತು ಮರಾಠಿ ಉದ್ಯಮಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಸಾಮಂತ್ ರಾಜ್ಯ ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು.

ಗಣ್ಯರಿಗೆ ನೀಡಲಾಗುವ ಮಹಾರಾಷ್ಟ್ರ ಭೂಷಣ ಪ್ರಶಸ್ತಿಯಂತೆಯೇ, ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿಯನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮತ್ತು ಕೈಗಾರಿಕೆ ಸಚಿವರನ್ನು ಒಳಗೊಂಡ ಸಮಿತಿ ಸಭೆ ನಡೆಸಿದೆ ಎಂದು ಅವರು ಹೇಳಿದ್ದಾರೆ.

andolanait

Recent Posts

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 mins ago

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…

17 mins ago

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

35 mins ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

1 hour ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

2 hours ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

2 hours ago