BREAKING NEWS

ಕೋಲ್ಕತ್ತದಲ್ಲಿ ಮೊದಲ ಅಂಡರ್ ವಾಟರ್ ಮೆಟ್ರೊ ಪ್ರಾಯೋಗಿಕ ಸಂಚಾರ

ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ ಕೋಲ್ಕತ್ತ ಮೆಟ್ರೊ ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ.
ಈ ಪ್ರಾಯೋಗಿಕ ಸಂಚಾರದಲ್ಲಿ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರು ಮಾತ್ರ ಭಾಗವಹಿಸಿದ್ದರು. ಇದೊಂದು ಐತಿಹಾಸಿಕ ಕ್ಷಣವಾಗಿದೆ ಎಂದು ಕೋಲ್ಕತ್ತ ಮೆಟ್ರೊ ರೈಲ್ವೇ ನಿರ್ವಾಹಕ ಪಿ ಉದಯ್‌ ಕುಮಾರ್‌ ರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ.

‘ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆ ಪರೀಕ್ಷಾರ್ಥ ಸಂಚಾರ ನಡೆಸಲಾಗಿದೆ. ಮುಂದಿನ ಐದರಿಂದ ಏಳು ತಿಂಗಳವರೆಗೆ ಪ್ರಾಯೋಗಿಕ ಸಂಚಾರವನ್ನು ಮುಂದುವರಿಸಲಾಗುತ್ತದೆ. ಇದಾದ ಬಳಿಕವಷ್ಟೇ ನಿಯಮಿತ ಸೇವೆಗಳು ಪ್ರಾರಂಭವಾಗುತ್ತದೆ‘ ಎಂದು ಉದಯ್‌ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಈ ಸುರಂಗ ಮಾರ್ಗವು ನದಿಯ ಮೇಲ್ಮೈಯಿಂದ 13 ಮೀಟರ್‌ ಕೆಳಗಿದ್ದು, ಭೂಮಿಯ ಮೇಲ್ಮೈಯಿಂದ 33 ಮೀಟರ್‌ ಕೆಳಗಿದೆ. ಸುರಂಗ ಮಾರ್ಗವನ್ನು ರೈಲು ಹಾದು ಹೋಗಲು ಸುಮಾರು 45 ಸೆಕೆಂಡ್‌ ತೆಗೆದುಕೊಳ್ಳುತ್ತದೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಹಾಗೂ ಸಂಚಾರ ದಟ್ಟಣೆಯನ್ನು ತಪ್ಪಿಸುವುದಕೋಸ್ಕರ ಅಂಡರ್‌ ವಾಟರ್‌ ಮೆಟ್ರೋ ಮಾರ್ಗವನ್ನು ನಿರ್ಮಿಸಲಾಗಿದೆ.

lokesh

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

2 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

4 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago