BREAKING NEWS

340 ಕೆಜಿ ತೂಕದ ಅಂಬೂರು ಮೀನಿನ ಖರೀದಿಗೆ ಮುಗಿಬಿದ್ದ ಮತ್ಸ್ಯಪ್ರಿಯರು

ಚಿಕ್ಕಮಗಳೂರು : ಮತ್ಸ್ಯ ಜಾತಿಯಲ್ಲೇ ಅಪರೂಪದ ತಳಿ ಅಂಬೂರು ಸಮುದ್ರ ಮೀನಿಗಾಗಿ ನಗರದಲ್ಲಿ ಮೀನುಪ್ರಿಯರು ಮುಗಿಬಿದ್ದಿದ್ದಾರೆ. ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರದ ಮೀನಿಗೆ ಗ್ರಾಹಕರು ಸರತಿ ಸಾಲಿನಲ್ಲಿ ನಿಂತು ಖರೀದಿಸಿದ್ದಾರೆ.

ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆಯ ಮೀನು ಮಳಿಗೆಗೆ ಇದೇ ಮೊದಲ ಬಾರಿಗೆ ಮಂಗಳೂರಿನಿಂದ ಬಂದ ಬರೋಬ್ಬರಿ 340 ಕೆಜಿ ತೂಕದ ಅಂಬೂರು ಸಮುದ್ರ ಮೀನು ಕಂಡು ಗ್ರಾಹಕರು ಹಾಗೂ ಸ್ಥಳೀಯರು ಶಾಕ್‌ ಆಗಿದ್ದಾರೆ.

ಪ್ರತಿ ಕೆಜಿಗೆ 600 ರೂ. ನಿಗದಿ ಮಾಡಿದ್ದ ಅಂಗಡಿ ಮಾಲೀಕ ಗ್ರಾಹಕರ ಬೇಡಿಕೆ ಹೆಚ್ಚಿದಂತೆ 1,000 ರೂ. ನಿಗದಿ ಮಾಡಿದ್ದಾನೆ. ಆದರೂ ಗ್ರಾಹಕರು ನಿರುತ್ಸಾಹಗೊಳ್ಳದೇ ಮುಗಿಬಿದ್ದು ಖರೀದಿಸಿದ್ದಾರೆ. ಗ್ರಾಹಕರನ್ನ ಸಂಭಾಳಿಸಲು ಅಂಗಡಿ ಮಾಲೀಕ ಕೂಡ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಅಷ್ಟೇ ಅಲ್ಲದೇ ಮೀನು ಖರೀದಿದಾರರ ಜೊತೆ ಬಂದು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದ ದೃಶ್ಯ ಕಂಡುಬಂದಿತು.

ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಿಗೆ ಭಾರತದಿಂದ ರಫ್ತಾಗುತ್ತದೆ. ಮೊದಲ ಬಾರಿಗೆ ಚಿಕ್ಕಮಗಳೂರಿನ ಗ್ರಾಹಕರ ಬೇಡಿಕೆಗೆ ಮಣಿದು ಅಂಗಡಿ ಮಾಲೀಕ ತರಿಸಿ ಮಾರಾಟ ಮಾಡಿದ್ದಾನೆ. ಗ್ರಾಹಕರ ಉತ್ಸಾಹ ಹಾಗೂ ಮೀನಿಗೆ ಇರುವ ಬೇಡಿಕೆ ಕಂಡು ಅಂಗಡಿ ಮಾಲೀಕ ಫುಲ್ ಖುಷ್‌ ಆಗಿದ್ದಾನೆ.

lokesh

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago