ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್ ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ, ಮಿಥಾಲಿ ರಾಜ್ ಹಾಗೂ ಜೂಲನ್ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್ ಕ್ಲಬ್ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ ಶ್ರೇಷ್ಠ ಕ್ರಿಕೆಟಿಗರಿಗೆ ತನ್ನ ಸದಸ್ಯತ್ವವನ್ನು ನೀಡುತ್ತಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಪರಿಗಣಿಸಿ ಎಂಎಸ್ ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ ಸೇರಿದಂತೆ ಐವರು ಭಾರತೀಯ ದಿಗ್ಗಜರಿಗೆ ಎಂಸಿಸಿ ತನ್ನ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಇದರ ಜೊತೆಗೆ ಟೆಸ್ಟ್ ಕ್ರಿಕೆಟ್ ಆಡುವ 8 ರಾಷ್ಟ್ರಗಳಿಂದ ಒಟ್ಟು 19 ಆಟಗಾರರಿಗೆ ಎಂಸಿಸಿ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ವೇಗಿ ಜೂಲನ್ ಗೋಸ್ವಾಮಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇವರ ಮಾಜಿ ಸಹ ಆಟಗಾರ್ತಿ ಹಾಗೂ ಬ್ಯಾಟಿಂಗ್ ದಿಗ್ಗಜೆ ಮಿಥಾಲಿ ರಾಜ್ ಮಹಿಳಾ ಒಡಿಐ ಕ್ರಿಕೆಟ್‌ನಲ್ಲಿ 211 ಇನಿಂಗ್ಸ್‌ಗಳಿಂದ 7,805 ರನ್ ಗಳಿಸಿದ್ದಾರೆ.
2007 ಮತ್ತು 2011ರ ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂಎಸ್ ಧೋನಿ ಹಾಗೂ ಯುವರಾಜ್ ಸಿಂಗ್ ಅವರಿಗೆ ಎಂಸಿಸಿ ಆಜೀವ ಸದಸ್ಯತ್ವವನ್ನು ನೀಡಿದೆ. ಇನ್ನು ಭಾರತ ತಂಡದ ಮಾಜಿ ಆಲ್‌ರೌಂಡರ್ ಸುರೇಶ್ ರೈನಾ, ಏಕದಿನ ಕ್ರಿಕೆಟ್‌ನಲ್ಲಿ 5,500 ರನ್‌ಗಳನ್ನು ಗಳಿಸಿದ್ದಾರೆ.
“ನಾವು ಹೊಸ ಅಂತಾರಾಷ್ಟ್ರೀಯ ಬೇಸಿಗೆಗಾಗಿ ತಯಾರಿ ನಡೆಸುತ್ತಿರುವಾಗ, ಎಂಸಿಸಿಯ ಗೌರವಾನ್ವಿತ ಆಜೀವ ಸದಸ್ಯರನ್ನು ಘೋಷಿಸಲು ರೋಮಾಂಚನಗೊಂಡಿದ್ದೇವೆ. ಇಂದು(ಬುಧವಾರ) ಘೋಷಿಸಿದ ಹೆಸರುಗಳು ಆಧುನಿಕ ಕ್ರಿಕೆಟ್‌ನ ಕೆಲ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರಾಗಿದ್ದು, ಈಗ ಅವರನ್ನು ನಮ್ಮ ಕ್ಲಬ್‌ನ ಮೌಲ್ಯಯುತ ಸದಸ್ಯರನ್ನಾಗಿ ಪರಿಗಣಿಸಲು ಸಂತಸವಾಗುತ್ತಿದೆ,” ಎಂದು ಎಂಸಿಸಿಯ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿಯಾಗಿರುವ ಗೈ ಲ್ಯಾವೆಂಡರ್ ಹೇಳಿದ್ದಾರೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…