ಮೈಸೂರು: ಪಾದಚಾರಿ ಮಾರ್ಗ ಅಡೆತಡೆ ತೆರವಿಗೆ ಸಂಚಾರ ಪೊಲೀಸರಿಂದ ಕಾರ್ಯಾಚರಣೆ

ಮೈಸೂರು: ಪಾದಚಾರಿ ಮಾರ್ಗಗಳಲ್ಲಿ ವ್ಯಾಪಾರದ ಸಾಮಗ್ರಿಗಳನ್ನಿಟ್ಟು ಸಾರ್ವಜನಿಕರ ಓಡಾಟಕ್ಕೆ ತೊಂದರೆಯುಂಟು ಮಾಡುತ್ತಿರುವ ಫುಟ್‌ಪಾತ್‌ ತೆರವು ಕಾರ್ಯಾಚರಣೆಯನ್ನು ಸಂಚಾರ ಪೊಲೀಸರು ಆರಂಭಿಸಿದ್ದಾರೆ.

ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರಸ್ಥರು ಪಾದಚಾರಿ ಮಾರ್ಗದಲ್ಲಿ ತಮ್ಮ ವ್ಯಾಪಾರದ ಸಾಮಗ್ರಿಗಳನ್ನಿಟ್ಟು ವ್ಯಾಪಾರ ಮಾಡುತ್ತಿದ್ದು, ಪಾದಚಾರಿಗಳ ಓಡಾಟಕ್ಕೆ ತೊಂದರೆಯುಂಟು ಮಾಡುತ್ತಿದ್ದಾರೆ. ನಗರ ಸಂಚಾರ ಪೊಲೀಸರು ದೇವರಾಜ ಸಂಚಾರ ಪೊಲೀಸ್‌ ಠಾಣೆ, ಕೆ.ಆರ್‌.ಸಂಚಾರ ಠಾಣೆ, ನರಸಿಂಹರಾಜ ಸಂಚಾರ ಠಾಣೆ, ವಿ.ವಿ.ಪುರಂ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಪುಟ್‌ಪಾತ್‌ ತೆರವುಗೊಳಿಸುತ್ತಿದ್ದಾರೆ.

ಕಾರ್ಯಾಚರಣೆಯಲ್ಲಿ ಈವರೆಗೆ 14 ಪ್ರಕರಣಗಳು ದಾಖಲಾಗಿವೆ. 5 ಐಎಂವಿ ಪ್ರಕರಣಗಳನ್ನು ದಾಖಲಿಸಿ, 3,200 ರೂ. ದಂಡ ಸಂಗ್ರಹಿಸಲಾಗಿದೆ. ಈ ಸಂಬಂಧ 6 ಮಂದಿಗೆ ನೋಟಿಸ್‌ ನೀಡಲಾಗಿದೆ ಎಂದು ಪೊಲೀಸ್‌ ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.

× Chat with us