BREAKING NEWS

ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಬಂದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ.

ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನವನ್ನು ನಡೆಸಲಾಯಿತು. ಆದರೆ ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯವನ್ನು ವ್ಯರ್ಥಗೊಳಿಸಿದರು. ಅವರು ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು, ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ , ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜಿನಾಮೆ ನೀಡಿದರೆ, ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.

andolanait

Recent Posts

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

60 mins ago

ನಾಳೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ

ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…

1 hour ago

ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ-ಗಂಭೀರ ಗಾಯ

ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…

3 hours ago

ಕೆ.ಆರ್‌.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೆ.ಆರ್.‌ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…

4 hours ago

ಓದುಗರ ಪತ್ರ: ಚುನಾವಣೋತ್ತರ.. !

ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…

4 hours ago

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…

4 hours ago