ಬೆಂಗಳೂರು : ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳ ಬಂಧನ ಸರಿಯಲ್ಲ. ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಪ್ರಚಾರದ ಗೀಳಿಗೆ ಬಿದ್ದಿದ್ದಾರೆ. ಏಕಾಏಕಿ ದಾಳಿ ನಡೆಸಿ ಬಂಧನ ಮಾಡುವುದು ಸರಿಯಾದ ಕ್ರಮ ಅಲ್ಲ. ನೂರಾರು ವರ್ಷಗಳಿಂದ ಇಂತಹ ವಸ್ತುಗಳ ಸಂಗ್ರಹ ಇದೆ. ಹಾಗೆ ಸಂಗ್ರಹಿಸಿಟ್ಟವರನ್ನೆಲ್ಲ ಬಂಧಿಸಿದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
ವನ್ಯಜೀವಿ ರಕ್ಷಣಾ ಕಾಯ್ದೆ ಬರುವ ಮೊದಲು ಹುಲಿ ಉಗುರು, ವನ್ಯ ಪ್ರಾಣಿಗಳ ವಸ್ತುಗಳು ಮಲೆನಾಡು, ಕರಾವಳಿ ಭಾಗದಲ್ಲಿ ಅಲಂಕಾರಿಕ ವಸ್ತುವಾಗಿತ್ತು. ಮಕ್ಕಳಿಗೆ ಹುಲಿ ಉಗುರು ತೊಡಿಸುತ್ತಿದ್ದರು. ಏಕಾಏಕಿ ವ್ಯಕ್ತಿಗಳನ್ನು ಬಂಧನ ಮಾಡಿದರೆ ಜೈಲುಗಳಲ್ಲಿ ಸ್ಥಳ ಸಾಕಾಗುವುದಿಲ್ಲ ಎಂದು ಹೇಳಿದರು.
ವನ್ಯಜೀವಿ ರಕ್ಷಣಾ ಕಾಯ್ದೆಗೆ ನಾನು ವಿರೋಧಿ ಅಲ್ಲ. ಆದರೆ ಹಿಂದಿನ ಕಾಲದಿಂದಲೂ ಮನೆಯಲ್ಲಿ ಉಗುರು ಇಟ್ಟಿರುವವರನ್ನೆಲ್ಲ ಬಂಧಿಸುವುದು ಸರಿಯಲ್ಲ. ಈ ಬಗ್ಗೆ ಸರ್ಕಾರ ಚರ್ಚೆ ನಡೆಸಬೇಕು ಎಂದು ಜ್ಞಾನೇಂದ್ರ ಆಗ್ರಹಿಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…