ಹಠಾತ್ತನೆ ಪ್ರತ್ಯಕ್ಷಗೊಂಡ ಕಾಡಾನೆ; ಗಾಬರಿಗೊಂಡ ಕಾರುಚಾಲಕ ಮಾಡಿದ್ದೇನು ಗೊತ್ತೇ?

ಮಡಿಕೇರಿ: ಕಾಡಾನೆ ಕಂಡು ಗಾಬರಿಗೊಂಡ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಕೊಡಗು ಜಿಲ್ಲೆಯ ಹುಂಡಿ ಗ್ರಾಮದಲ್ಲಿ ಇಂದು ನಡೆದಿದೆ.

ಪಾಲಿಬೆಟ್ಟದಿಂದ ಸಿದ್ದಾಪುರಕ್ಕೆ ಬರುತ್ತಿದ್ದ ವೇಳೆ ಹಠಾತ್ತನೆ ಪ್ರತ್ಯಕ್ಷವಾದ ಕಾಡಾನೆ ಕಂಡು ಬೆಚ್ಚಿದ ಚಾಲಕ, ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅದೃಷ್ಟವಶಾತ್‌ ಕಾರುಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬುದು ಪೊಲೀಸ್‌ ಮೂಲಗಳು ತಿಳಿಸಿವೆ.

× Chat with us