Mysore
21
clear sky

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಬಿಜೆಪಿ ಅವಧಿಯ ಶೇ.40% ಲಂಚ ಪ್ರಕರಣ ತನಿಖೆಗೆ ನ್ಯಾ.ನಾಗಮೋಹನ್‍ದಾಸ್ ನೇತೃತ್ವದ ಸಮಿತಿ‌ ರಚನೆ

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಾದ ಕಾಮಗಾರಿಗಳು,ಟೆಂಡರ್, ಪ್ಯಾಕೇಜ್ ಗಳು,ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.‌

ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ಲೋಕೋಪಯೋಗಿ ಇಲಾಖೆ ಅಪರ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

ಯಾವೆಲ್ಲಾ ಅಂಶಗಳ ತನಿಖೆ : ಯೋಜನೆ, ಕಾಮಗಾರಿಗಳಿಗೆ ನಿಯಮಾನುಸಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆಯೇ?

ಅನುಷ್ಠಾನಗೊಳಿಸಿದ ಕಾಮಗಾರಿ, ಯೋಜನೆಗಳ ಗುಣಮಟ್ಟ, ಕಾಮಗಾರಿಗಳ ಅಂದಾಜುಗಳನ್ನು ಪ್ರಚಲಿತ ಅನುಸೂಚಿ ದರಗಳ (ಎಸ್‌ಆರ್) ಅನುಸಾರ ತಯಾರಿಸಲಾಗಿದೆಯೇ?

-ಕಾಮಗಾರಿಗಳ ಅಂದಾಜಿನಲ್ಲಿರುವ ಪ್ರಮಾಣ ವಾಸ್ತ ವಿಕವಾಗಿದೆಯೇ? ಕೃತಕವಾಗಿ ಹೆಚ್ಚಿಸಲಾಗಿದೆಯೇ? ಹೆಚ್ಚಿಸಿದ್ದರೆ ಅವುಗಳ ಪ್ರಮಾಣ ಮತ್ತು ಹಣಕಾಸಿನ ಬದ್ಧತೆಯ ಜೊತೆಗೆ ಯಾವ ಹಂತದಲ್ಲಿದೆ ಎಂಬುದನ್ನು ಪರೀಕ್ಷಿಸುವುದು

-ಈ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಿರುವ ಹೆಚ್ಚುವರಿ ವ್ಯತ್ಯಾಸದ ಅನಿವಾರ್ಯ ಮತ್ತು ಅಗತ್ಯ. ಅನಿವಾರ್ಯವಾಗಿದ್ದರೆ ಮೂಲ ಅಂದಾಜಿನಲ್ಲಿ ಕೈಬಿಡಲು ಕಾರಣಗಳು ಮತ್ತು ಅವುಗಳಿಗೆ ಸಕ್ಷಮ ಪ್ರಾಧಿಕಾರವು ಅನುಮೋದನೆ ನೀಡಿರುವ ಬಗ್ಗೆ ಯಾವುದಾದರೂ ಕಾಮಗಾರಿಗಳನ್ನು ನಿರ್ವಹಿಸದೇ ಬಿಲ್ ಮಾಡಲಾಗಿದೆಯೇ? ಅನುಷ್ಠಾನದ ಕಾಮಗಾರಿಗಳ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಬಿಲ್ ವತಿಸಲಾಗಿದೆಯೇ?

-ಕಾಮಗಾರಿಗಳ ಟೆಂಡರ್‌ಗಳನ್ನು ಕರೆಯುವಾಗ ಕೆಲವೇ ಗುತ್ತಿಗೆದಾರರಿಗೆ ಅನುಕೂಲ ಆಗುವಂತೆ ಹಾಗೂ ಉಳಿದ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಗಳಲ್ಲಿ ಭಾಗವಹಿಸದಂತೆ ಷರತ್ತು ರೂಪಿಸಲಾಗಿತ್ತೇ?

ಇ‌ನ್ನು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ,ಅನುಷ್ಠಾನ ಪ್ರಕ್ರಿಯೆಗಳಲ್ಲಿ ಉಂಟಾಗಿರಬಹುದಾದ ಇತರ ಯಾವುದಾದರೂ ಲೋಪದೋಷಗಳು ಬಗ್ಗೆ ಸಮಿತಿ ತ‌ನಿಖೆ‌ ನಡೆಸಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!