BREAKING NEWS

ಸ್ವಾಯತ್ತ ಕೊಡಗಿಗೆ ಆಯೋಗ ರಚನೆ ವಿಚಾರ : ಏಪ್ರಿಲ್‌ 17 ಕ್ಕೆ ಹೈಕೋರ್ಟ್‌ ನಲ್ಲಿ ವಿಚಾರಣೆ

ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್‌ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಯ ವಿಚಾರಣೆಯನ್ನು ಹೈಕೋರ್ಟ್‌ ಏಪ್ರಿಲ್‌ 17 ಕ್ಕೆ ನಿಗಧಿ ಪಡಿಸಿದೆ.
ಈ ಬಗ್ಗೆ ರಾಜ್ಯಸಭಾ ಸದಸ್ಯರಾದ ಡಾ.ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ.ಗುರುವಾರ ಮುಖ್ಯ ನ್ಯಾಯಮೂರ್ತಿ ಪಿ.ಬಿ ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿದ್ದ ಅವರು,ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಕೋರಿ ಮೆಮೊ ಸಲ್ಲಿಸಿದ್ದರು.ಆ ಮೆಮೊ ಸ್ವೀಕರಿಸಿದ ನ್ಯಾಯಪೀಠ ಇದೇ ಏಪ್ರಿಲ್‌ 17 ಕ್ಕೆ ವಿಚಾರಣೆ ನಿಗಧಿಪಡಿಸಿತ್ತು,ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆ ಹೊಂದಿದ್ದಾರೆ.ಇದರಿಂದ ಸಂವಿಧಾನದ ಪರಿಚ್ಛೇದ 242 ಅಡಿಯಲ್ಲಿ ಸ್ಟೇಟ್‌ ಆಫ್‌ ಕೂರ್ಗ್‌ ಎಂದು ಗುರುತಿಸಲಾಗಿದೆ.ಅದರಂತೆ ಸ್ಟೇಟ್‌ ಆಫ್‌ ಕೂರ್ಗ್‌ ಗೆ ಲೋಕಸಭೆ ಮತ್ತು ರಾಜ್ಯಸಭೆಗೆ ತಲಾ ಓರ್ವ ಸದಸ್ಯರನ್ನು ಕಳುಹಿಸಲು ಅವಕಾಶವಿದೆ.ಸಿ ಸ್ಟೇಟ್‌ ಕಾಯ್ದೆ 1952 ರ ಪ್ರಕಾರ ಕೂರ್ಗ್‌ ಎಂಬುದು ಭಾರತೀಯ ಒಕ್ಕೂಟದ ಸಿ ಸ್ಟೇಟ್‌ ಭಾಗಾಗಿದೆ.ಕೂರ್ಗ್‌ ಸ್ವಯಂ ಅವಲಂಬಿತ ಸ್ಟೇಟ್‌ ಆಗಿದ್ದು,1956 ರಲ್ಲಿ ಮೈಸೂರು ರಾಜ್ಯದೊಂದಿಗೆ ವಿಲೀನ ಮಾಡಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.ಅಲ್ಲದೇ ಸಂವಿಧಾನದ ಆರನೇ ಶೆಡ್ಯೂಲ್‌ ನಲ್ಲಿ ಸ್ಥಳೀಯ ಮತ್ತು ಬುಡಕಟ್ಟು ಸಮೂಹದ ಹಕ್ಕುಗಳನ್ನು ಸಂರಕ್ಷಿಸಲು ಅಟಾನಮಸ್‌ ಡಿಸ್ಟ್ರಿಕ್‌ ಕೌನ್ಸಿಲ್ (ಎಸಿಡಿ) ಸಹ ಸ್ಥಾಪಿಸಲಾಗಿದೆ.ಭಾರತದ ಈಶಾನ್ಯ ಭಾಗದ ಪ್ರದೇಶಗಳಾದ ಅಸ್ಸಾಂ,ಮಿಜೋರಾಂ,ಮೆಘಾಲಯ ಮತ್ತು ತ್ರಿಪುರ ರಾಜ್ಯಗಳಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲಾಗಿದೆ.ಅದೇ ರೀತಿ ಕೊಡವ ಸಮುದಾಯದವರು ವಿಭಿನ್ನ ಭೌಗೋಳಿಕ,ಇತಿಹಾಸ ಮತ್ತು ಸಂಸ್ಕೃತಿ ಹಿನ್ನೆಲೆ ಹೊಂದಿದ್ದಾರೆ.ಅವರ ಹಕ್ಕುಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಕೊಡವ ಸಮುದಾಯಕ್ಕೆ ಭೌಗೋಳಿಕ ರಾಜಕೀಯ ಸ್ವಾಯತ್ತತೆ ನೀಡಲು ಕೋರಿ ಸಿಎನ್ ಸಿ ಮನವಿ ಸಲ್ಲಿಸಿದೆ.ಆ ಬಗ್ಗೆ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಮಾಡಲು ಆಯೋಗವೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.ಕಾನೂನು ಇಲಾಖೆ ಕಾರ್ಯದರ್ಶಿ,ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿ,ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಹಾಗು ಕೊಡವ ನ್ಯಾಷನಲ್‌ ಕೌನ್ಸಿಲ್‌ ಅಧ್ಯಕ್ಷ ಎನ್.ಯು.ನಾಚಪ್ಪ ಅವರನ್ನು ಅರಿಯಲ್ಲಿ ಪ್ರತಿವಾದಿಗಳು ಎಂದು ಗುರುತಿಸಲಾಗಿದೆ.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

10 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

11 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago