BREAKING NEWS

ಬಿಬಿಎಂಪಿ ಯೋಜನೆಗಳು ಹಾಗೂ ಕಾಮಗಾರಿಗಳ ಅಕ್ರಮಗಳ ಕುರಿತು ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ 2019 ರಿಂದ ಈವರೆಗೆ ನಡೆದಿರುವ ಯೋಜನೆಗಳು ಹಾಗೂ ಕಾಮಗಾರಿಗಳ ಅಕ್ರಮಗಳ ಕುರಿತು ತನಿಖೆಗೆ ನಾಲ್ವರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ದಳ ( ಎಸ್ ಐಟಿ) ರಚಿಸಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆದೇಶದ ಮೇರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದಿರುವ ಘನತ್ಯಾಜ್ಯ ನಿರ್ವಹಣೆ, ರಸ್ತೆ ಅಭಿವೃದ್ಧಿ ಓಎಫ್‍ಸಿ ಕೇಬಲ್ ಅಳವಡಿಕೆ, ಬೃಹತ್ ನೀರು ಕಾಲುವೆ ಕಾಮಗಾರಿ, ಕೇಂದ್ರ ವಲಯ ನಗರ ಯೋಜನೆಗಳ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿ, ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿನ ಕಾಮಗಾರಿಗಳು, ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ದೂರುಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

ಈಗಾಗಲೇ ತನಿಖೆಗೆ ಒಳಪಡಿಸಿರುವ ಕಾಮಗಾರಿಗಳನ್ನು ಹೊರತುಪಡಿಸಿ ಉಳಿದವುಗಳನ್ನು ಸ್ಥಳ ಮತ್ತು ದಾಖಲಾತಿಗಳ ಪರಾಮರ್ಶೆಯೊಂದಿಗೆ ಆರೋಪಿತರ ಸ್ಪಷ್ಟ ಗುರುತಿಸುವಿಕೆಯ ಸಹಿತ ಪರಿಪೂರ್ಣ ವರದಿಯನ್ನು ಸೂಕ್ತ ಅಭಿಪ್ರಾಯ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಲು ಆದೇಶಿಸಲಾಗಿದೆ.

ತನಿಖೆಗೆ ನಾಲ್ವರು ಐಎಎಸ್ ಅಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳ ಆರೋಪಗಳ ಕುರಿತು ಹಿರಿಯ ಐಎಎಸ್ ಅಕಾರಿ ಉಜ್ವಲ್ ಕುಮಾರ್ ಘೋಷ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ದೊಡ್ಡಿಹಾಳ್, ಬಸವರಾಜ ಕೋಟಿ, ಕೆಪಿಟಿಸಿಎಲ್‍ನ ನಿವೃತ್ತ ಸಹಾಯಕ ಕಾರ್ಯಪಾಲಕ ಅಭಿಯಂತರ ಟಿ.ಪ್ರಭಾಕರ್ ಅನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೂ ಒಎಫ್‍ಸಿ ಕೇಬಲ್ ಅಳವಡಿಕೆಗೆ ಅನುಮತಿ ನೀಡುವ ಬಗ್ಗೆ ಐಎಎಸ್ ಅಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದು, ಲೋಕೋಪಯೋಗಿ ನಿವೃತ್ತ ಪ್ರಧಾನ ಅಭಿಯಂತರ ಪ್ರಭಾಕರ್ ಡಿ.ಹಮ್ಮಿಗೆ, ನಿವೃತ್ತ ಮುಖ್ಯ ಅಭಿಯಂತರ ಕೆ.ಮೋಹನ್, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಬಸವರಾಜ್ ಶಂಸಿ ಮಠ್, ಎನ್.ಎಸ್.ಮೋಹನ್ ಸದಸ್ಯರಾಗಿದ್ದಾರೆ.

ಬೃಹತ್ ನೀರುಗಾಲುವೆ ಕಾಮಗಾರಿಗಳು ಹಾಗೂ ಕೇಂದ್ರ, ವಲಯ, ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪತ್ರ ನೀಡಿರುವ ಕುರಿತು ಐಎಎಸ್ ಅಕಾರಿ ಪಿ.ಸಿ.ಜಾಫರ್ ಅಧ್ಯಕ್ಷತೆಯಲ್ಲಿ ಮೂವರ ಸಮಿತಿ ರಚನೆಯಾಗಿದ್ದು, ಇಐಸಿಆರ್ನ ನಿವೃತ್ತ ಕಾರ್ಯದರ್ಶಿ ಎಚ್.ಬಿ.ಸಿದ್ದಗಂಗಪ್ಪ, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಎಚ್.ಆರ್.ರಾಮಕೃಷ್ಣ, ನಿವೃತ್ತ ಕಾರ್ಯಪಾಲಕ ಅಭಿಯಂತರ ಮಲ್ಲೇಶ್ ಸಮಿತಿಯಲ್ಲಿದ್ದಾರೆ.

ಕೆರೆ ಅಭಿವೃದ್ಧಿ ಕಾಮಗಾರಿಗಳು ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಹಾಗೂ ವಾರ್ಡ್ ಮಟ್ಟದ ಕಾಮಗಾರಿಗಳ ತನಿಖಾ ಸಮಿತಿಗೆ ಐಎಎಸ್ ಅಕಾರಿ ಡಾ.ವಿಶಾಲ್ ಅವರು ಅಧ್ಯಕ್ಷರಾಗಿದ್ದು, ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರ ಬೀಸೇಗೌಡ, ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಎಚ್.ಪಿ.ಪ್ರಕಾಶ್, ಶ್ರೀಕಾಂತ್, ಎಚ್.ಕುಮಾರ್, ಜಿ.ಎಸ್.ಗೋಪಿನಾಥ್ ಸದಸ್ಯರಾಗಿದ್ದಾರೆ.

ತನಿಖಾ ವ್ಯಾಪ್ತಿಗೆ ಕೆಲವು ನಿಬಂಧನೆಗಳನ್ನು ವಿಸಲಾಗಿದೆ. ಕೈಗೆತ್ತಿಕೊಳ್ಳಲಾದ ಕಾಮಗಾರಿಗಳಿಗೆ ಅಗತ್ಯ ಶಾಸನಬದ್ಧ ಅನುಮತಿಗಳನ್ನು ಪಡೆಯಲಾಗಿದೆಯೇ, ಕೆಟಿಪಿಪಿ ಕಾಯ್ದೆ ಪಾಲನೆ ಮತ್ತು ಸರ್ಕಾರದ ಅನುಮತಿ ಇದೆಯೇ, ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಾವಳಿಗಳನ್ನು ತಿರುಚುವುದು ಅಥವಾ ಸಡಿಲಗೊಳಿಸುವ ಮೂಲಕ ದುವ್ರ್ಯವಹಾರ ನಡೆಸಿ ಅನರ್ಹರಿಗೆ ಟೆಂಡರ್ ನೀಡಲಾಗಿದೆಯೇ, ನಿರ್ದಿಷ್ಟ ಗುತ್ತಿಗೆದಾರರ ಹೆಸರಿನಲ್ಲಿ ಕಾರ್ಯಾದೇಶ ನೀಡಿ ಬೇರೆಯವರಿಗೆ ಬಿಲ್ ಪಾವತಿ ಮಾಡಿರುವುದು ಸೇರಿದಂತೆ 16 ಅಂಶಗಳನ್ನು ತನಿಖೆ ನಡೆಸಲು ಸೂಚಿಸಲಾಗಿದೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago