ಹೈದರಾಬಾದ್ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ.
ನಂದ್ಯಾಲ್ ಡಿಐಜಿ ರಘುರಾಮಿ ರೆಡ್ಡಿ ಮತ್ತು ಅಪರಾಧ ತನಿಖಾ ದಳ ನೇತೃತ್ವದ ಪೊಲೀಸರ ಆರ್‌ಕೆ ಫಂಕ್ಷನ್ ಹಾಲ್‌ನಲ್ಲಿರುವ ನಾಯ್ಡು ಅವರ ನಿವಾಸಕ್ಕೆ ಮುಂಜಾನೆ 3 ಗಂಟೆಗೆ ಆಗಮಿಸಿದ್ದಾರೆ.
ಈ ಸಮಯದಲ್ಲಿ ಚಂದ್ರಬಾಬು ನಾಯ್ದು ವಿಶ್ರಾಂತಿ ಪಡೆಯುತ್ತಿದ್ದರು. ಪೊಲೀಸರು ವಶಕ್ಕೆ ಪಡೆಯಲು ಬಂದ ವಿಚಾರ ತಿಳಿದು ಭಾರೀ ಸಂಖ್ಯೆಯಲ್ಲಿ ನಾಯ್ಡು ಮನೆ ಬಳಿ ಅಭಿಮಾನಿಗಳು ಸೇರಿದ್ದರು. ಅಭಿಮಾನಿಗಳ ಪ್ರತಿಭಟನೆಯಿಂದ ಪೊಲೀಸರಿಗೆ ನಾಯ್ದು ಅವರನ್ನು ವಶಕ್ಕೆ ಪಡೆಯಲು ಸಾಧ್ಯವಾಗಲಿಲ್ಲ.
ನಾಯ್ಡು ಅವರ ರಕ್ಷಣೆಗೆ ನಿಯೋಜನೆಗೊಂಡಿದ್ದ ಎಸ್‌ಪಿಜಿ ಪಡೆಗಳು ಸಹ ಪೊಲೀಸರಿಗೆ ಅನುಮತಿ ನೀಡಿರಲಿಲ್ಲ. ಕೊನೆಗೆ 6 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಬಂಧಿಸಿದರು.
ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದ್ದು, ಅವರು ಎ1 ಆರೋಪಿ ಎಂದು ಡಿಐಜಿ ರಘುರಾಮಿ ರೆಡ್ಡಿ ತಿಳಿಸಿದರು.
ಐಪಿಸಿ ಸೆಕ್ಷನ್ 120 (8), 166, 167, 418, 420, 465, 468, 471, 409 ರ ಅಡಿಯಲ್ಲಿ ಬಂಧಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…