Mysore
29
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಅ.10 ರಂದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ

ಗದಗ: ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ‌ ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ  ತಿಳಿಸಿದ್ದಾರೆ.

ಶನಿವಾರ ಕುಂದ್ರಳ್ಳಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಮಾತನಾಡಿದ ಮಾಜಿ ಶಾಸಕ ರಾಮಣ್ಣ ಲಮಾಣಿ, ʼʼನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ. ಅಕ್ಟೋಬರ್ 10 ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆʼʼ ಎಂದು ಹೇಳಿದ್ದಾರೆ.

ಅಕ್ಟೋಬರ್ 10 ರಂದು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ ಬಿಜೆಪಿಯ ಮಾಜಿ ಶಾಸಕ

ʼʼಬಿಜೆಪಿಯಲ್ಲಿ ಎರಡು ಬಾರಿ ಶಾಸಕನಾಗಿ ಶಿರಹಟ್ಟಿ ಮುಂಡರಗಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮೂರನೇ ಬಾರಿಗೆ ಕೊನೆಯ ಹಂತದವರೆಗೂ ಎಲ್ಲಾ ಕಡೆ ಕಾರ್ಯಕ್ರಮಕ್ಕೆ ಖರ್ಚುವೆಚ್ಚಗಳನ್ನು ಮಾಡಿದ್ದೆ. ಆದರೆ ಕೊನೆಯ ಹಂತದಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಕೊಡಲಿಲ್ಲ. ಆದರೂ ನಿಷ್ಠಾವಂತನಾಗಿ ಬಿಜೆಪಿಯಲ್ಲಿ ದುಡಿದಿದ್ದೇನೆ. ಆದರೆ ಈಗಿನ ಶಾಸಕ ಡಾ. ಚಂದ್ರು ಲಮಾಣಿ ಅವರು ಬಿಜೆಪಿ ಕಾರ್ಯಕರ್ತರನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲʼʼ ಎಂದು ಆರೋಪಿಸಿದ್ದಾರೆ.

ಇತ್ತೀಚೆಗಷ್ಟೇ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ