BREAKING NEWS

ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

lokesh

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

10 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago