ನವದೆಹಲಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖ ಅವರು ಬಿಜೆಪಿ ಸೇರಿದರು.
ಅವಿಭಜಿತ ಆಂಧ್ರ ಪ್ರದೇಶದ ಕೊನೇ ಮುಖ್ಯಮಂತ್ರಿಯಾಗಿದ್ದ ಅವರು, ಮಾರ್ಚ್ 12ರಂದು ಕಾಂಗ್ರೆಸ್ ತೊರೆದಿದ್ದರು.
ಆಂಧ್ರ ಪ್ರದೇಶದ ವಿಭಜನೆಯನ್ನು ವಿರೋಧಿಸಿದ್ದ ಕಿರಣ್ ಕುಮಾರ್ 2014ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ನಿಂದ ಹೊರಬಂದಿದ್ದರು. ಕಾಂಗ್ರೆಸ್ ತೊರೆದ ಬಳಿಕ, ‘ಕಿರಣ್ ಜೈ ಸಮೈಕ್ಯಾ ಆಂಧ್ರ’ ಪಕ್ಷವನ್ನು ಕಟ್ಟಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಈ ಪಕ್ಷ ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾಗಿತ್ತು. ನಂತರ 2018ರಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಿದ್ದರು. ಈಗ ಬಿಜೆಪಿಗೆ ಸೇರಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…