ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನು ಕಗ್ಗಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ.
ಇದೇ ವಿಚಾರ ಇಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್ ನಾಯಕರು ಅಧಿವೇಶನದಲ್ಲಿ ಬಿಜೆಪಿ ನಾಯಕರ ಕಾಲೆಳೆಯುತ್ತಿದ್ದಾರೆ. ಈ ವಿಚಾರವಾಗಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಟ್ವೀಟ್ ಮಾಡಿ “ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು” ಎಂದು ಹೇಳುವ ಮೂಲಕ ತಮ್ಮ ಪಕ್ಷಕ್ಕೆ ಸೇರುವಂತೆ ಆಹ್ವಾನ ನೀಡಿದ್ದಾರೆ.
ಎಂ.ಬಿ ಪಾಟೀಲ್ ಟ್ವೀಟ್ “ಶೀಘ್ರದಲ್ಲೇ ವಿಪಕ್ಷ ನಾಯಕರಾಗಲಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಅಭಿನಂದನೆಗಳು. ಅಂತಿಮವಾಗಿ ಬಿಜೆಪಿ ಬಸವರಾಜ ಬೊಮ್ಮಾಯಿಯವರನ್ನು ಮೂಲೆಗುಂಪು ಮಾಡಲು ನಿರ್ಧರಿಸಿದಂತಿದೆ. ಬೊಮ್ಮಾಯಿಯವರಿಗೂ ಸಹ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಬಂದಂತಹ ಪರಿಸ್ಥಿತಿಯೇ ಬರಲಿದೆ.
ಬಿಜೆಪಿ ಎಂಬುದು ಕುಸಿಯುತ್ತಿರುವ ಕಾರ್ಡ್ಗಳ ಮನೆಯಾಗಿದೆ. ಬೊಮ್ಮಾಯಿಯವರು ಕಾಂಗ್ರೆಸ್ ಸೇರುವ ಬಗ್ಗೆ ಯೋಚಿಸಬೇಕು. ಅವರು ಈ ಹಿಂದಿನಂತೆ ಹಾಗೂ ಹಿರಿಯ ಬೊಮ್ಮಾಯಿಯವರಂತೆ (ಎಸ್ ಆರ್ ಬೊಮ್ಮಾಯಿ) ಜಾತ್ಯಾತೀತ ಸಿದ್ಧಾಂತಕ್ಕೆ ಮರಳಿದರೆ ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಬಹುದು” ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಕಾಂಗ್ರೆಸ್ ಪಕ್ಷದ ಗ್ಯಾರೆಂಟಿ ಯೋಜನೆಯಲ್ಲಿರುವ ಲೋಪದೋಷಗಳನ್ನು ಪ್ರಸ್ತಾಪಿಸಿದರು. ಅಲ್ಲದೇ ನಾಗಮಂಗಲದ ಕೆಎಸ್ಆರ್ಟಿಸಿ ಬಸ್ ಡ್ರೈವರ್ ಕಂ ಕಂಡೆಕ್ಟರ್ ಆತ್ಮಹತ್ಯೆ ಯತ್ನ ಮತ್ತು ಸಾಕಷ್ಟು ಚರ್ಚೆಯಾದ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಪ್ರಸ್ತಾಪಿಸಿದರು.
ಹೆಚ್ ಡಿ ಕುಮಾರಸ್ವಾಮಿಯವರು ಸರ್ಕಾರದ ವಿರುದ್ಧ ಒಂದೊಂದೆ ಅಸ್ತ್ರಗಳಿಗೆ ಬಿಜೆಪಿ ನಾಯಕರು ಬೆಂಬಲ ವ್ಯಕ್ತಪಡಿಸಿದರು.
2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಿಧಾನಮಂಡಲದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ವಿವಿಧ ವಿಷಯಗಳಲ್ಲಿ ಪರಸ್ಪರ ಬೆಂಬಲ ವ್ಯಕ್ತಪಡಿಸಿವೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…