Mysore
36
few clouds

Social Media

ಶನಿವಾರ, 18 ಏಪ್ರಿಲ 2026
Light
Dark

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವೈದ್ಯರ ಸಲಹೆ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವಿಶ್ರಾಂತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಹೆಚ್‌ಡಿಕೆ, ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!