ನವದೆಹಲಿ: ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್‌ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.
‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…