BREAKING NEWS

ಭಾರತದ ಮಾಜಿ ಕ್ರಿಕೆಟರ್‌ ಸಲೀಂ ದುರಾನಿ ನಿಧನ

ನವದೆಹಲಿ: ಕ್ಯಾನ್ಸರ್‌ನೊಂದಿಗೆ ದೀರ್ಘಕಾಲದ ಹೋರಾಟ ನಡೆಸಿದ್ದ ಭಾರತದ ಮಾಜಿ ಕ್ರಿಕೆಟಿಗ ಸಲೀಂ ದುರಾನಿ (88) ಅವರು ಭಾನುವಾರ ಗುಜರಾತ್‌ನ ಜಾಮನಗರದಲ್ಲಿರುವ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸಲೀಂಭಾಯಿ ಎಂದೇ ಖ್ಯಾತರಾಗಿದ್ದ ಅವರು, 1934ರಲ್ಲಿ ಅಫ್ಗಾನಿಸ್ತಾನದ ಕಾಬೂಲಿನಲ್ಲಿ ಸಲೀಂ ಜನಿಸಿದ್ದರು. ನಂತರದ ದಿನಗಳಲ್ಲಿ ಅವರ ಕುಟುಂಬವು ಭಾರತಕ್ಕೆ ಬಂದು ನೆಲೆಸಿತ್ತು. ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಗುಜರಾತ್, ರಾಜಸ್ಥಾನ ಮತ್ತು ಸೌರಾಷ್ಟ್ರ ತಂಡಗಳನ್ನು ಪ್ರತಿನಿಧಿಸಿದ್ದರು. ಎಡಗೈ ಆಲ್‌ರೌಂಡರ್ ಆಗಿದ್ದ ಸಲೀಂ ಅವರು 170 ಪ್ರಥಮ ದರ್ಜೆ ಪಂದ್ಯಗಳಲ್ಲಿ ಆಡಿದ್ದರು. 1960 ರಿಂದ 1973ರ ಅವಧಿಯಲ್ಲಿ ಭಾರತ ತಂಡದಲ್ಲಿ 29 ಟೆಸ್ಟ್‌ ಪಂದ್ಯಗಳನ್ನು ಆಡಿದ್ದರು.

‘ಸಿಕ್ಸರ್ ಬಾರಿಸುವುದೇ ಅಪರೂಪ ಎಂಬಂತಿದ್ದ ಕಾಲದಲ್ಲಿ ಪ್ರೇಕ್ಷಕರ ಕೋರಿಕೆ ಮೇರೆಗೆ ಸಿಕ್ಸರ್ ಬಾರಿಸುತ್ತಿದ್ದ ದುರಾನಿ ಯಾವಾಗಲೂ ನೆನಪಿನಲ್ಲಿ ಉಳಿಯುವಂಥವರು’ ಎಂದು ಮುಂಬೈನ ಕುಟುಂಬ ಸ್ನೇಹಿತರೊಬ್ಬರು ಸ್ಮರಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಸಲೀಂ ದುರಾನಿ ಅವರು ಕ್ರಿಕೆಟ್ ದಂತಕಥೆ. ಕ್ರಿಕೆಟ್ ಜಗತ್ತಿನಲ್ಲಿ ಭಾರತದ ಉದಯಕ್ಕೆ ಪ್ರಮುಖ ಕೊಡುಗೆ ನೀಡಿದವರು. ಮೈದಾನದ ಒಳಗೆ ಮತ್ತು ಹೊರಗೆ ಅವರು ತಮ್ಮ ಆಟದ ಶೈಲಿಗೆ ಹೆಸರುವಾಸಿಯಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

andolanait

Recent Posts

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

54 mins ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

1 hour ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

2 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

3 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

4 hours ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

4 hours ago