Mysore
18
scattered clouds

Social Media

ಬುಧವಾರ, 24 ಡಿಸೆಂಬರ್ 2025
Light
Dark

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ.

ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4.25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾದರು. ಬಳಿಕ 1970 ರಲ್ಲಿ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು.

ಸದ್ಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದು, ಇತ್ತ ಅಗಲಿದ ಹಿರಿಯ ನಾಯಕನ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!