BREAKING NEWS

ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ ನಿಧನ

ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಅಂಜನ ಮೂರ್ತಿ ಅವರು 10ನೇ ಏಪ್ರಿಲ್ 1941ರಲ್ಲಿ ಜನಿಸಿದರು. ಬಿಎ, ಬಿ.ಎಲ್ ಪದವೀಧರರು. 1989-1994 ಮತ್ತು 1999 ರಿಂದ 23 ಫೆಬ್ರವರಿ 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.

  • 18.03.1993, 1994 ರಲ್ಲಿ Dy, ಸ್ಪೀಕರ್ ಆಗಿದ್ದರು.
  • 2003 ರಿಂದ 2004 ರವರೆಗೆ ಕರ್ನಾಟಕದ SC/ST ಆಯೋಗದ ಅಧ್ಯಕ್ಷರು.
  • 16.12.2005 ರಿಂದ 06 ರವರೆಗೆ ಪ್ರಧಾನ ಕಾರ್ಯದರ್ಶಿ- ತಾಲೂಕು ಯುವ ಕಾಂಗ್ರೆಸ್
  • 1972-76ಸದಸ್ಯರು-ತಾಲೂಕು ಅಭಿವೃದ್ಧಿ ಮಂಡಳಿ [ಟಿಡಿಬಿ), ನೆಲಮಂಗಲ
  • 1978-83 ಲ್ಯಾಂಡ್ ಟ್ರಿಬ್ಯೂನಲ್ ಸದಸ್ಯ
  • 1980-82 ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
  • 1980-85 ಅಧ್ಯಕ್ಷರು SC/ST ಸಮಿತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
  • 1983-88 ಅಧ್ಯಕ್ಷರು, ವಕೀಲರ ವಕೀಲರ ಸಂಘ, ನೆಲಮಂಗಲ
  • 1985-88 ನೆಲಮಂಗಲದ  ಅರುಂಧತಿ ವಿದುವಾ ಸಂಸ್ಥೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಕೀಯ ಚಟುವಟಿಕೆಗಳು

ಮಾರ್ಚ್ 1993ರಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-06 ರಿಂದ ವಸತಿ ಸಚಿವರಾಗಿದ್ದರು. ನವದೆಹಲಿಯಲ್ಲಿ ನಡೆದ 89 ಅಂತರ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಖಿಲ ಭಾರತ ಪೀಠಾಧಿಪತಿಗಳಾಗಿ ಹಾಜರಾಗಿದ್ದರು. 1994ರಲ್ಲಿ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಪೀಠಾಧಿಪತಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶಿಯೋಮಣಿ ಸಂಸ್ಥೆ, ನವದೆಹಲಿಯಿಂದ ಶಿರೋಮಣಿ ವಿಕಾಸ್ ಪ್ರಶಸ್ತಿ ನೀಡಿ ಅಂಜನ ಮೂರ್ತಿಯವರನ್ನು ಗೌರವಿಸಿತ್ತು. ಮಾನವ ಸೇವಾ ಪುರಸ್ಕಾರ, 1993ರಲ್ಲಿ ವಿಶೇಷ ಸ್ಕ್ರಾಲ್ ಆಫ್ ಆನರ್ ಸೇರಿದಂತೆ ಕೆಲವು ಗೌರವಗಳು ಸಿಕ್ಕಿವೆ.

andolanait

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

18 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

58 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago