ಮಾಜಿ ಸಚಿವ ಎಚ್.ಟಿ.ಕೃಷ್ಣಪ್ಪ ನಿಧನ

ಬೆಂಗಳೂರು: ಮಾಜಿ ಸಚಿವ, ಹಿರಿಯ ಮುತ್ಸದ್ಧಿ ಎಚ್‌.ಟಿ.ಕೃಷ್ಣಪ್ಪ (91) ಅವರು ಗುರುವಾರ ಹೃದಯಾಘಾತದಿಂದ ನಿಧನರಾದರು.

ಬೆಂಗಳೂರಿನ ಬಸವೇಶ್ವರ ನಗರದ ಅವರ ಸ್ವಗೃಹದಲ್ಲಿ ಗುರುವಾರ ತಡರಾತ್ರಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ನಾಗಮಂಗಲ ಪಟ್ಟಣದ ಟಿ.ಬಿ.ಬಡಾವಣೆ ಹೇಮಾವತಿ ಕ್ವಾಟ್ರಸ್ ಮುಂಭಾಗದ ಅವರ ಜಮೀನಿನಲ್ಲಿ ನಡೆಯಲಿದೆ.

1986 ರಲ್ಲಿ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾಗಿ ಕೃಷ್ಣಪ್ಪ ಅವರು ಕಾರ್ಯನಿರ್ವಹಿಸಿದ್ದರು.

× Chat with us