ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.
ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.
1936ರಲ್ಲಿ ಜನಿಸಿದ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್ ಸದಸ್ಯರಾಗಿ ಮತ್ತು 3 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಡಿ.ಬಿ. ಚಂದ್ರೇಗೌಡ ಅವರು 1967ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ ಅವರು ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ 6ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.
1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.
1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ಆಯ್ಕೆಯಾಗಿ 1999ರಿಂದ 2004ರವರೆಗೆ ಎಸ್.ಎಂ. ಕೃಷ್ಣಾ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2008ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…