BREAKING NEWS

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಚಿಕ್ಕಮಗಳೂರು : ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ (87) ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.

ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

1936ರಲ್ಲಿ ಜನಿಸಿದ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್‌, ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್‌ ಸದಸ್ಯರಾಗಿ ಮತ್ತು 3 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಡಿ.ಬಿ. ಚಂದ್ರೇಗೌಡ ಅವರು 1967ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ ಅವರು ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ 6ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ಆಯ್ಕೆಯಾಗಿ 1999ರಿಂದ 2004ರವರೆಗೆ ಎಸ್.ಎಂ. ಕೃಷ್ಣಾ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2008ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago