ಬೆಂಗಳೂರು : ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.
ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬರಮಾಡಿಕೊಂಡರು.
ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ʼʼಬಿಜೆಪಿ – ಜೆಡಿಎಸ್‌ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿʼʼ ಎಂದು ತಿಳಿಸಿದರು.
“ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಡಿ.ಕೆ. ಶಿವಕುಮಾರ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪ್ರಶ್ನಿಸಿದ್ದಾರೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…