BREAKING NEWS

ಮಾಜಿ ಶಾಸಕ ಎಂ.ಸಿ.ಅಶ್ವಥ್ ಸೇರಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು : ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು.

ಸೋಮವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬರಮಾಡಿಕೊಂಡರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್‌, ʼʼಬಿಜೆಪಿ – ಜೆಡಿಎಸ್‌ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿʼʼ ಎಂದು ತಿಳಿಸಿದರು.

“ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಡಿ.ಕೆ. ಶಿವಕುಮಾರ್ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಪ್ರಶ್ನಿಸಿದ್ದಾರೆ.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

8 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

9 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

11 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

14 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

15 hours ago