ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಬಿಜೆಪಿ ನಾಯಕಿ ಪೂರ್ಣಿಮಾ ಶ್ರೀನಿವಾಸ್, ಶ್ರೀನಿವಾಸ್, ನರಸಿಂಹ ನಾಯಕ್ ಅವರು ತಮ್ಮ ಅಪಾರ ಬೆಂಬಲಿಗರ ಜತೆ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಸಿಎಂ ವೀರಪ್ಪ ಮೊಯ್ಲಿ, ದೆಹಲಿಯಲ್ಲಿ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮುಖಂಡರಾದ ಪ್ರೊ ರಾಜೀವ್ ಗೌಡ, ನಸೀರ್ ಅಹ್ಮದ್, ನಾಗರಾಜ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಮಾಜಿ ಸಚಿವ ಎ.ಕೃಷ್ಣಪ್ಪ ಅವರ ಪುತ್ರಿಯಾಗಿರುವ ಪೂರ್ಣಿಮಾ, ಯಾದವ(ಗೊಲ್ಲ) ಸಮುದಾಯದ ಮುಖಂಡರೂ ಆಗಿದ್ದಾರೆ. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೂರ್ಣಿಮಾ ಸೇರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.