ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಏಮ್ಸ್‌ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ: ಜ್ವರ ಹಾಗೂ ನಿಶ್ಯಕ್ತಿ ಕಾರಣದಿಂದಾಗಿ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು (ಬುಧವಾರ) ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯರೂ ಆಗಿರುವ ಮನಮೋಹನ್‌ ಸಿಂಗ್‌ (88) ಅವರಿಗೆ ಕೋವಿಡ್‌ ಎರಡನೇ ಅಲೆ ಸಂದರ್ಭದಲ್ಲಿ ಕೊರೊನಾ ಸೋಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದರು.

× Chat with us