ನವದೆಹಲಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ಚರಂಜಿತ್ ಸಿಂಗ್ ಅತ್ವಾಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಶುಕ್ರವಾರ ಸೇರ್ಪಡೆಗೊಂಡರು.
ಚರಂಜಿತ್ ಸಿಂಗ್ ಅತ್ವಾಲ್ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಂಡರು.
2004 ರಿಂದ 2009 ರವರೆಗೆ 14 ನೇ ಲೋಕಸಭೆಯ ಉಪ ಸ್ಪೀಕರ್ ಆಗಿದ್ದ ಚರಂಜಿತ್ ಸಿಂಗ್ ಅತ್ವಾಲ್ ಅವರು ಈ ಹಿಂದೆ ಪಂಜಾಬ್ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು.
ಅತ್ವಾಲ್ ಅವರು 15 ಮಾರ್ಚ್ 1937 ರಂದು ಜನಿಸಿದರು.
14 ನೇ ಲೋಕಸಭೆಯಲ್ಲಿ ಪಂಜಾಬ್‌ನ ಫಿಲ್ಲೌರ್ ಕ್ಷೇತ್ರವನ್ನು ಪ್ರತಿನಿಧಿಸಿದರು ಮತ್ತು ಶಿರೋಮಣಿ ಅಕಾಲಿದಳ ಸದಸ್ಯರಾಗಿದ್ದರು. ಪಂಜಾಬ್ ವಿಧಾನಸಭೆಯ ಎರಡು ಬಾರಿ ಸ್ಪೀಕರ್ ಕೂಡ ಆಗಿದ್ದರು.
ಚರಂಜಿತ್ ಅವರ ಪುತ್ರ ಇಂದರ್ ಇಕ್ಬಾಲ್ ಸಿಂಗ್ ಅತ್ವಾಲ್ ಅವರು ಪಂಜಾಬ್‌ನ ಹಲವಾರು ಇತರರೊಂದಿಗೆ ಭಾನುವಾರ ನವದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದ್ದರು ಎಂಬುದು ಗಮನಾರ್ಹ.
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ…
ಬೆಂಗಳೂರು: ಮಾರ್ಚ್.18ರಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಬಿಡುಗಡೆ…
ಜೆರುಸೇಲಂ: ನಾನಿನ್ನೂ ಬದುಕಿದ್ದೇನೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಸಾವಿನ ವದಂತಿಗಳ ನಡುವೆ ವಿಡಿಯೋದಲ್ಲಿ ಕಾಣಿಸಿಕೊಂಡು ಸಂದೇಶ…
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…