ಮಾಜಿ ಸ್ಪೀಕರ್‌ ಕೆ.ಆರ್‌.ಪೇಟೆ ಕೃಷ್ಣ ಇನ್ನಿಲ್ಲ

ಕೆ.ಆರ್‌.ಪೇಟೆ: ಲಿವರ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್‌ ಕೆ.ಆರ್‌.ಪೇಟೆ ಕೃಷ್ಣ ಅವರು ಇಂದು (ಶುಕ್ರವಾರ) ಸಂಜೆ ನಿಧನರಾದರು.

ಚಿಕಿತ್ಸೆಗಾಗಿ ಚೆನ್ನೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮತ್ತೆ ಮೈಸೂರಿಗೆ ಕರೆತರಲಾಗಿತ್ತು. ಇಂದು ಮೈಸೂರಿನಲ್ಲಿ ಕೊನೆಯುಸಿರೆಳೆದರು.

ನಾಳೆ ಬೆಳಿಗ್ಗೆ 10 ಗಂಟೆಗೆ ಕೆ.ಆರ್‌.ಪೇಟೆ ತಾಲ್ಲೂಕಿನ ಕೊತ್ತಮಾರನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇವರು ಮೂರು ಬಾರಿ ಕೆ.ಆರ್‌.ಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1988ರ ಎಸ್‌.ಆರ್‌.ಬೊಮ್ಮಾಯಿ ಅವರ ಸಂಪುಟದಲ್ಲಿ ಪಶುಸಂಗೋಪನಾ ಮತ್ತು ರೇಷ್ಮೆ ಸಚಿವರಾಗಿದ್ದರು. 1996ರಲ್ಲಿ ಮಂಡ್ಯದ ಸಂಸದರಾಗಿದ್ದರು. 2008ರಲ್ಲಿ ಸ್ಪೀಕರ್‌ ಆಗಿದ್ದರು.

× Chat with us