BREAKING NEWS

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ  76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ ಅವರನ್ನು ಬಂಧಿಸಿ ಬಿಗಿ ಭದ್ರತೆಯಲ್ಲಿ ವಿಚಾರಣೆಗೆ ಕರೆದುಕೊಂಡು ಹೋಗಲಾಯಿತು ಎಂದು ಬಿಬಿಸಿ ವರದಿ ಮಾಡಿದೆ.

ಅಮೆರಿಕದ ಇತಿಹಾಸದಲ್ಲೇ ಕ್ರಿಮಿನಲ್‌ ಆರೋಪ ಪ್ರಕರಣದ ವಿಚಾರಣೆ ಎದುರಿಸಿದ, ಬಂಧನಕ್ಕೆ ಒಳಗಾದ ಮೊದಲ ಅಧ್ಯಕ್ಷ ಟ್ರಂಪ್‌ ಆಗಿದ್ದಾರೆ.

ನಮ್ಮ ನಡುವಿನ ಅನೈತಿಕ ಸಂಬಂಧ ಬಹಿರಂಗಪಡಿಸಬಾರದು’ ಎಂದು ನೀಲಿಚಿತ್ರ ತಾರೆಯೊಬ್ಬರಿಗೆ ಹಣ ಸಂದಾಯ ಮಾಡಿದ್ದ ಕುರಿತಂತೆ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

 

‘ಕಾನೂನು ಸಲಹಾ ಸಿಬ್ಬಂದಿ ಜೊತೆ ಬಂದಿದ್ದ ಟ್ರಂಪ್‌ ಅವರು, ಕ್ರಿಮಿನಲ್‌ ಆರೋಪ ಪ್ರಕರಣದಲ್ಲಿ ನನ್ನ ತಪ್ಪಿಲ್ಲ. ನಾನು ನಿರ್ದೋಷಿ’ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುವಾನ್ ಮರ್ಚನ್ ಅವರಿಗೆ ಮನವಿ ಸಲ್ಲಿಸಿದರು.

ಟ್ರಂಪ್‌ 2024ರ ಅಧ್ಯಕ್ಷೀಯ ಚುನಾವಣೆ ಸಿದ್ಧತೆಯಲ್ಲಿದ್ದು, ಎರಡನೇ ಬಾರಿಗೆ ಆಯ್ಕೆ ಬಯಸಿದ್ದಾರೆ. ಹೀಗಾಗಿ, ಈ ಬೆಳವಣಿಗೆ ಅಮೆರಿಕದಲ್ಲಿ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.

ವಿಚಾರಣೆಗೆ ಮ್ಯಾನ್ ಹಾಟನ್‌ಗೆ ಬಂದ ಟ್ರಂಪ್‌ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ, ‘ಇದು ಅವಾಸ್ತವಿಕ. ಬಹುಶಃ ಅವರು ನನ್ನನ್ನು ಬಂಧಿಸಬಹುದು. ಅಮೆರಿಕದಲ್ಲಿ ಇಂತಹದ್ದು ಘಟಿಸುತ್ತಿದೆ ಎನ್ನುವುದನ್ನು ನಂಬಲು ಆಗುತ್ತಿಲ್ಲ‘ ಎಂದು ‘ಟ್ರೂತ್‌’ ಜಾಲತಾಣದ ಖಾತೆಯಲ್ಲಿ ಟ್ರಂಪ್‌ ಪೋಸ್ಟ್‌ ಹಾಕಿದ್ದರು.

ಟ್ರಂಪ್‌ ಅವರ ವಿಚಾರಣೆಯು ಮಾಧ್ಯಮಗಳ ಗಮನಸೆಳೆದಿದೆ. ಕೋರ್ಟ್‌ನ ಬಳಿ ಮಾಧ್ಯಮಗಳ ಪ್ರತಿನಿಧಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದರು. ಅಲ್ಲದೆ, ಟ್ರಂಪ್‌ ವಿರೋಧಿಗಳು ಪ್ರತಿಭಟನ ರ‍್ಯಾಲಿಯನ್ನು ಕೈಗೊಂಡಿದ್ದು, ಬೆಂಬಲಿಗರು ಸೇರಿದ್ದರು. ಕೋರ್ಟ್‌ ಆವರಣಕ್ಕೆ ತೆರಳುವ ಮೊದಲು ಬೆಂಬಲಿಗರತ್ತ ಟ್ರಂಪ್‌ ಕೈಬೀಸಿದರು.

ವಶಕ್ಕೆ ಪಡೆದ ಹಿಂದೆಯೇ ಪೊಲೀಸರು, ಕೋರ್ಟ್‌ ಹಾಲ್‌ಗೆ ಕರೆದೊಯ್ಯುವ ಮೊದಲು ಟ್ರಂಪ್‌ ಅವರ ಬೆರಳಚ್ಚುಗಳ ಮಾದರಿ ಪಡೆದರು. ಹೆಸರು, ವಯಸ್ಸು, ಎತ್ತರ, ತೂಕ ಒಳಗೊಂಡಂತೆ ವ್ಯಕ್ತಿಗತ ಮಾಹಿತಿ ಪಡೆದರು. ಅವರ ವಿರುದ್ಧ ಯಾವುದಾದರೂ ವಾರಂಟ್ ಬಾಕಿ ಇದೆಯೇ ಎಂದು ಪರಿಶೀಲಿಸಿದರು.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

30 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago