ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮಾಲ್ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತರನ್ನು ಕಾವ್ಯ, ಹನಿ, ರಾಜೇಶ್ ಹಾಗೂ ದೀಪಕ್ ಎಂದು ಗುರುತಿಸಲಾಗಿದೆ.
ಗುರುವಾರ ನಡೆದ ರಾಮನವಮಿ ಮೆರವಣಿಗೆ ವೇಳೆ ಮಸೀದಿಯ ಸಮೀಪ ಇರುವ ಕಟ್ಟಡವೊಂದರಲ್ಲಿ ಕೇಸರಿ ಧ್ವಜ ಹಾರಿಸಿದ ಆರೋಪ ಇವರ ಮೇಲೆ ಇದೆ.ಘಿಯಾಮಂಡಿ ಪ್ರದೇಶದಲ್ಲಿರುವ ರಾಮ ಮಂದಿರದ ರಾಮ ಜನ್ಮ ಮಹೋತ್ಸವ ಸಮಿತಿ ಆಯೋಜಿಸಿದ್ದ ಮೆರವಣಿಗೆಯು ಚೌಕ್ ಬಜಾರ್ ಬಳಿ ತಲುಪಿದಾಗ ಇವರು ಈ ಕೃತ್ಯ ಎಸಗಿದ್ದಾರೆ.
ವಾಹನ ಚಲಾಯಿಸುತ್ತಿದ್ದ ಈ ನಾಲ್ವರು, ಮಸೀದಿಯ ಬಳಿ ಇದ್ದ ಕಟ್ಟಡ ಏರಿ, ಅಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರ ಕೃತ್ಯದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸ್ಥಳದಲ್ಲಿ ಹಿಂದೂ–ಮುಸ್ಲಿಮರ ನಡುವೆ ಕೋಮು ಉದ್ವೇಗಗೊಳಿಸುವ ವಾತಾವರಣ ಸೃಷ್ಠಿಯಾಗಿತ್ತು. ಕೂಡಲೇ ಸ್ಥಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಸಂಭಾವ್ಯ ಅಪಾಯವನ್ನು ತಪ್ಪಿಸಲಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…