Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಲಕ್ಕೆ ಮಿನಿ ಗೂಡ್ಸ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು.

ಸ್ಥಳವೊಂದರಲ್ಲಿ ವಾಹನವು ತಗ್ಗಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಅಲ್ಲಿಂದ ಮೇಲೆ ಚಲಿಸಲು ಸಾಧ್ಯವಾಗಿಲ್ಲ. ಆಗ ವಾಹನದಲ್ಲಿದ್ದ ಮೂವರು ಕೆಳಗಿಳಿದು ವಾಹನವನ್ನು ತಳ್ಳಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಅವರ ಸಹಾಯಕ್ಕೆ ಧಾವಿಸಿ, ವಾಹನವನ್ನು ತಳ್ಳಲು ಮುಂದಾಗಿದ್ದಾರೆ.

ಇದೇ ವೇಳೆ ವಾಹನದೊಳಗೆ ಹಸುಗಳಿಗೆ ಟಾರ್ಪಲ್ ಹೊದಿಸಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡು ನಾಲ್ವರನ್ನು ವಿಚಾರಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರೊಬ್ಬರ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಫಯಾಜ್ ಎಂದು ಗುರುತಿಸಲಾಗಿದೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದು, ಉಳಿದವರು ಉಳ್ಳಾಲದವರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ