BREAKING NEWS

ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ಮಂಗಳೂರು : ಹಸುಗಳನ್ನು ಕಸಾಯಿಕಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಹಸುಗಳನ್ನು ಖರೀದಿಸಿದ್ದಾರೆ. ನಂತರ ಅವುಗಳನ್ನು ವಧೆ ಮಾಡಲು ಜಿಲ್ಲೆಯ ಉಳ್ಳಾಲ ತಾಲೂಕಿನ ಅಲೇಕಲಕ್ಕೆ ಮಿನಿ ಗೂಡ್ಸ್ ವಾಹನದಲ್ಲಿ ಕೊಂಡೊಯ್ಯುತ್ತಿದ್ದರು.

ಸ್ಥಳವೊಂದರಲ್ಲಿ ವಾಹನವು ತಗ್ಗಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಅಲ್ಲಿಂದ ಮೇಲೆ ಚಲಿಸಲು ಸಾಧ್ಯವಾಗಿಲ್ಲ. ಆಗ ವಾಹನದಲ್ಲಿದ್ದ ಮೂವರು ಕೆಳಗಿಳಿದು ವಾಹನವನ್ನು ತಳ್ಳಲು ಪ್ರಾರಂಭಿಸಿದ್ದಾರೆ. ಇದನ್ನು ಕಂಡ ಗ್ರಾಮಸ್ಥರು ಅವರ ಸಹಾಯಕ್ಕೆ ಧಾವಿಸಿ, ವಾಹನವನ್ನು ತಳ್ಳಲು ಮುಂದಾಗಿದ್ದಾರೆ.

ಇದೇ ವೇಳೆ ವಾಹನದೊಳಗೆ ಹಸುಗಳಿಗೆ ಟಾರ್ಪಲ್ ಹೊದಿಸಿದ್ದನ್ನು ಗ್ರಾಮಸ್ಥರು ಗಮನಿಸಿದ್ದಾರೆ. ಅನುಮಾನಗೊಂಡು ನಾಲ್ವರನ್ನು ವಿಚಾರಿಸಿದಾಗ, ಅವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳೀಯರೊಬ್ಬರ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಅಹ್ಮದ್ ಇರ್ಷಾದ್, ಖಾಲಿದ್ ಬಿಎಂ, ಜಾಫರ್ ಸಾದಿಕ್ ಮತ್ತು ಫಯಾಜ್ ಎಂದು ಗುರುತಿಸಲಾಗಿದೆ. ಖಾಲಿದ್ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯ ಬಂಗ್ರ ಮಂಜೇಶ್ವರದವರಾಗಿದ್ದು, ಉಳಿದವರು ಉಳ್ಳಾಲದವರು.

AddThis Website Tools
lokesh

Recent Posts

ಅಂತರ್ಜಾತಿ ವಿವಾಹ ಹೆಚ್ಚಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ…

48 mins ago

ರಾಜಕೀಯವಾಗಿ ಸಿಟಿ ರವಿ ಮುಗಿಸುವ ಹುನ್ನಾರ: ಸಂಸದ ಜಗದೀಶ್‌ ಶೆಟ್ಟರ್‌

ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್‌ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್‌.ಸಿ. ಸಿಟಿ ರವಿ ಅವರನ್ನು…

53 mins ago

ಯುವಕರು ವಿವೇಕಾನಂದರ ಚಿಂತನೆ ಅಳವಡಿಸಿಕೊಳ್ಳಿ : ಎಂ.ವಿ ಪ್ರಕಾಶ್

ಮಂಡ್ಯ: ಯುವಕರು ಸ್ವಾಮಿ ವಿವೇಕಾನಂದರ ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ‌ ಜೀವನದಲ್ಲಿ ರೂಡಿಸಿಕೊಳ್ಳುವಂತೆ ಎಂದು ನಗರಸಭೆ ಅಧ್ಯಕ್ಷ ಎಂ ವಿ…

1 hour ago

ಚಾಂಪಿಯನ್ಸ್‌ ಟ್ರೋಫಿ ತಂಡ ಪ್ರಕಟ : ನ್ಯೂಜಿಲೆಂಡ್‌ಗೆ ಸ್ಯಾಂಟ್ನರ್‌ ನಾಯಕ

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು,…

1 hour ago

ಮೈಶುಗರ್‌ ಕಾರ್ಖಾನೆ ಖಾಸಗೀಕರಣದ ಪ್ರಸ್ತಾಪವೇ ಇಲ್ಲ : ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌.…

2 hours ago

ಸಂವಿಧಾನವನ್ನು ಜೀವನದ ಧ್ಯೇಯವಾಗಿಸಿಕೊಂಡು ಸಿಎಂ ಸಿದ್ದರಾಮಯ್ಯ ಆಡಳಿತ ನಿರ್ವಹಣೆ: ಬೈರತಿ ಸುರೇಶ್‌

ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್‌…

2 hours ago